ಸಂಜೆವಾಣಿ ವಾರ್ತೆ
ಹಿರಿಯೂರು ಜು.೧೦; ಇಲ್ಲಿನ ಶ್ರೀ ಸತ್ಯಸಾಯಿ ಪ್ರೌಢಶಾಲೆಯಲ್ಲಿ 2021- 22ನೇ ಮತ್ತು 2022- 23ನೇ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಪರವಾಗಿ ನಿರ್ದೇಶಕರಾದ ನಾಗಭೂಷಣ್ ರವರು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಗೆ ಬಿಸಿಯೂಟದ ತಟ್ಟೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರು ಕೆ ಆರ್ ವೆಂಕಟೇಶ್, ಸಹ ಕಾರ್ಯದರ್ಶಿಗಳಾದ ಹೆಚ್ .ಎಸ್ ರಂಗನಾಥ್ , ಶಾಲೆಯ ಮಾಜಿ ಕಾರ್ಯದರ್ಶಿಗಳು ಹಾಗೂ ವಾಸವಿ ವಿದ್ಯಾಸಂಸ್ಥೆಯ ಹಾಲಿ ನಿರ್ದೇಶಕರಾದ ಪ್ರಕಾಶ್ ಕುಮಾರ್ , ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿಗಳಾದ ಜ್ಞಾನೇಶ್ವರಿ ಹಾಗೂ ಎಚ್ ಎಸ್ ಬಾಬು ಮುಖ್ಯ ಶಿಕ್ಷಕರಾದ ಅರವಿಂದ್ ಟಿ ಪಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿವರ್ಗದವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು.