ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವುದನ್ನು ನಿಲ್ಲಿಸಲು ಮಠಪತಿ ಆಗ್ರಹ

ಕಲಬುರಗಿ,ಡಿ.06: ರಾಜ್ಯದ ಸರ್ಕಾರದ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟದ ಜೊತೆಗೆ ಮಕ್ಕಳಿಗೆ ಮೊಟ್ಟೆ ನೀಡುವ ನಿರ್ಧಾರ ಪುನರ್ ಪರಿಶೀಲನೆ ಮಾಡುವುದು ಅಗತ್ಯವಾಗಿದ್ದು, ಈ ದಿಸೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಈ ಕುರಿತು ಸವಿಸ್ತಾರವಾಗಿ ಆಲೋಚಿಸಿ ಮೊಟ್ಟೆ ನೀಡುವುದನ್ನು ಕೂಡಲೇ ನಿಲ್ಲಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ನಾಗಲಿಂಗಯ್ಯ ಮಠಪತಿ ಅವರು ಮನವಿ ಮಾಡಿದ್ದಾರೆ.
ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವುದು ಅಗತ್ಯವಿದ್ದು ಕೇವಲ ಮೊಟ್ಟೆ ತಿನ್ನುವುದರಿಂದ ಮಾತ್ರ ಪೌಷ್ಟಿಕತೆ ಸಿಗುವುದಿಲ್ಲ. ಅದರ ಬದಲಾಗಿ ದ್ವಿದಳ ಧಾನ್ಯ, ಸಿರಿಧಾನ್ಯ, ಹಸಿಕಾಳು, ಶೇಂಗಾ-ಬೆಲ್ಲ ಸೇರಿದಂತೆ ಅನೇಕ ಪದಾರ್ಥಗಳಲ್ಲಿ ಅತ್ಯಧಿಕವಾಗಿ ಪೌಷ್ಟಿಕಾಂಶತೆ ಹೊಂದಿದ್ದು, ಹೀಗಾಗಿ ಮೊಟ್ಟೆ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ಕೂಡಲೇ ಹಿಂದಕ್ಕೆ ಸರಿಯುವಂತೆ ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.