ವಿದ್ಯಾರ್ಥಿಗಳಿಗೆ ಶಿಕ್ಷಣ ತಲುಪುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು

ಕೋಲಾರ,ಆ,೨೧-ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ತಲುಪುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಜಿಲ್ಲಾ ಮುಖ್ಯ ಆಯುಕ್ತ ಕೆ.ವಿ.ಶಂಕರಪ್ಪ ಅಭಿಪ್ರಾಯಪಟ್ಟರು.
ನಗರದ ಸ್ಕೌಟ್ ಭವನದಲ್ಲಿ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ ಶಾಲೆಗಳಿಗೆ ಕಂಠವಸ್ತ್ರ ಮತ್ತು ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡಿ, ವಾರದಲ್ಲಿ ಒಂದು ಅವಧಿಯಲ್ಲಿ ಸ್ಕೌಟ್ಸ್ ಗೈಡ್ಸ್ ಶಿಕ್ಷಣವನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳನ್ನು ಬೆಳಸಬೇಕು, ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಸ್ವಯಂ ಸೇವಾ ಮನೋಭಾವನೆ, ಸಹಕಾರ ಮನೋಭಾವ, ನಾಯಕತ್ವ, ಶಿಸ್ತು ಮುಂತಾದ ಮೌಲ್ಯಗಳು ವೃದ್ದಿಸಲಿವೆ, ಈ ಶಿಕ್ಷಣವನ್ನು ಮಕ್ಕಳಿಗೆ ತಲುಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಹೇಳಿದರು.
ಜಿಲ್ಲಾ ಆಯುಕ್ತ ಕೆ.ಆರ್.ಸುರೇಶ್ ಮಾತನಾಡಿ, ಈ ವರ್ಷ ಜಿಲ್ಲೆಯ ೩೭೫೦ ವಿದ್ಯಾರ್ಥಿಗಳು ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದು ಮುಂದಿನ ವರ್ಷ ೫೦೦೦ ಮಕ್ಕಳನ್ನು ಬೇಸಿಗೆ ಶಿಬಿರದಲ್ಲಿ ತೊಡಗಿಸುವ ಮೂಲಕ ಉತ್ತಮ ಸಮಾಜ ಮಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಕೌಟ್ ಬಾಬು, ಚೇತನ್, ವೇಣುಗೋಪಾಲ್ ಇದ್ದರು.