ವಿದ್ಯಾರ್ಥಿಗಳಿಗೆ ಶಿಸ್ತು, ಸಮಯಪಾಲನೆ ಮುಖ್ಯ

ಶಹಾಬಾದ:ಮಾ.14:ವಿದ್ಯಾರ್ಥಿ ಜೀವನದಲ್ಲಿ ಸಮಯಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಾಸಾಂಗ ಮಾಡಲು ಸಾಧ್ಯವಾಗುತ್ತದೆ ಎಂದು ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು. ಅವರು ನಗರದ ಶ್ರೀಶರಣಬಸವೇಶ್ವರ ದೇವಸ್ಥಾನ ಸಮಿತಿಯ ಶ್ರೀಮತಿ ಮಹಾದೇವಮ್ಮ ಆಸ್ಪಲಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಬೀಳ್ಕೋಡುಗೆ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು. ಮಕ್ಕಳ ಆಸಕ್ತಿಗೆ ಅನುಗುಣವಾಗಿ ಪೊಷಕರು ವಿಷಯಗಳನ್ನು ಆಯ್ದುಕೊಳ್ಳು ಸ್ವಾತಂತ್ರ್ಯ ನೀಡಬೇಕು ಎಂದು ಹೇಳಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪುತ್ರ ಕರಣಿಕ ಮಾತನಾಡುತ್ತ, ಮಕ್ಕಳು ವಿದೇಯತೆಯನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವಿದ್ಯೆ ಸಾರ್ಥಕತೆ ಕಾಣುತ್ತದೆ. ಉತ್ತಮ ಸಮುದಾಯದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗದುದ್ದು ವಿದ್ಯಾರ್ಥಿಗಳು ಪರೀಕ್ಷೆಯನ್ನು ಪೂರ್ವ ಸಿದ್ಧತೆಯೊಂದಿಗೆ ಎದುರಿಸಿದಾಗ ಪರೀಕ್ಷಾ ಭಯ ದೂರವಾಗುತ್ತದೆ, ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು. ಮುಖ್ಯಗುರು ಶೋಭಾ ಅರಳಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರಸಭೆ ಸದಸ್ಯರಾದ ಸಾಬೇರಾ ಬೇಗಂ, ಪಾರ್ವತಿ ಪವಾರ, ವೇದಿಕೆಯಲ್ಲಿದ್ದರು. ಜ್ಯೋತಿ ಅನಿಸಿಕೆ ಹೇಳಿದರು. ಚಂದುಲಾಲ ಬಸುದೆ ಸ್ವಾಗತಿಸಿದರು. ಶಿಲ್ಪಾ ಕೊಲ್ಲೂರಕರ್, ನಿರೂಪಿಸಿದರು. ರಮೇಶ ಜೋಗದನಕರ್, ವಂದಿಸಿದರು.