ವಿದ್ಯಾರ್ಥಿಗಳಿಗೆ ಹಳೆಯ ಬಸ್‍ಪಾಸ್ ತೋರಿಸಿ ಬಸ್‍ನಲ್ಲಿ ಪ್ರಯಾಣಿಸಲು ಅವಕಾಶ

ಕಲಬುರಗಿ.ಜ.2:ಜಿಲ್ಲೆಯಲ್ಲಿ ಈಗಾಗಲೇ ಜನವರಿ 1ರಿಂದ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಶಾಲಾ/ ಕಾಲೇಜುಗಳು ಪ್ರಾರಂಭವಾಗಿವೆ. ಸಂಸ್ಥೆಯ ಬಸ್‍ಗಳಲ್ಲಿ ಕಳೆದ ವರ್ಷದ (2019-20)ನೇ ಸಾಲಿನ ಹಳೆಯ ಬಸ್‍ಪಾಸ್ ಹಾಗೂ ಪ್ರಸಕ್ತ ವರ್ಷದಲ್ಲಿ ಶಾಲಾ, ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿಸಿರುವ ರಸೀದಿ ತೋರಿಸಿ ಎಲ್ಲಾ ವಿದ್ಯಾರ್ಥಿಗಳು ಜ. 31ರವರೆಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೂರ್ಮರಾವ್.ಎಂ. ಅವರು ತಿಳಿಸಿದ್ದಾರೆ.

   ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಶಾಲಾ, ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ ರಸೀದಿ ಹಾಗೂ 2019-20 ನೇ ಸಾಲಿನ ಬಸ್‍ಪಾಸ್ ತೋರಿಸಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ, ಕಾಲೇಜುಗಳಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು.   

  ಅಲ್ಲದೇ, ವಿದ್ಯಾರ್ಥಿಗಳಿಗೆ 2020-21ನೇ ಸಾಲಿನ ಬಸ್‍ಪಾಸ್‍ಗಳನ್ನು ಸೇವಾ ಸಿಂಧು ಮೂಲಕ ಅರ್ಜಿ ಪಡೆದು ಬಸ್‍ಪಾಸ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಕೂಡಲೇ ಹೊಸ ಬಸ್‍ಪಾಸ್‍ಗಳನ್ನು ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.