ವಿದ್ಯಾರ್ಥಿಗಳಿಗೆ ಹೆಚ್ಚಿನ ಬಸ್ ಬಿಡುಗಡೆಗೆ ರೈತ ಸಂಘ ಒತ್ತಾಯ

ಲಿಂಗಸುಗೂರು ೦೯-ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಬಸ್ ಸೌಲಭ್ಯ ಒದಗಿಸಲು ಬಸ್ ಡಿಪೋ ಮ್ಯಾನೇಜರ್ ಆದಪ್ಪ ಕುಂಬಾರ ಇವರಿಗೆ ರೈತ ಸಂಘದ ಮುಖಂಡರು ಮನವಿ ಸಲ್ಲಿಸಿದರು.
ತಾಲೂಕಿನ ಬಹುತೇಕ ಗ್ರಾಮಗಳ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಿಂಗಸುಗೂರು ನಗರದಲ್ಲಿ ಇರುವ ವಿವಿಧ ಕಾಲೇಜುಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಲಿಂಗಸುಗೂರು ನಗರಕ್ಕೆ ಬರುವುದರಿಂದ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಇರದೆ ಇರುವುದರಿಂದ ವಿದ್ಯಾರ್ಥಿಗಳ ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದ ಉದಾಹರಣೆಗಳು ಸಿಗುತ್ತವೆ ಎನ್ನುವುದು ರೈತ ಸಂಘದ ಅಧ್ಯಕ್ಷ ಶಿವಪುತ್ರ ಗೌಡ ನಂದಿಹಾಳ ಇವರು ಮನವಿ ಮಾಡಿದ್ದಾರೆ.
ಕೂಡಲೇ ಬಸ್ ಡಿಪೋ ಮ್ಯಾನೇಜರ್ ಆದಪ್ಪ ಕುಂಬಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಬಸ್ ಅವಕಾಶ ಮಾಡಬೇಕು ಹಾಗೂ ತಾಲೂಕಿನ ಬಹುತೇಕ ಶಾಲೆಗಳಲ್ಲಿ ಮಕ್ಕಳಿಗೆ ಬಸ್ ಪಾಸ್ ವಿತರಣೆ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರೈತ ಸಂಘದ ಕಾರ್ಯಕರ್ತರ ಮುಖಂಡರು ವಿದ್ಯಾರ್ಥಿಗಳು ಸೇರಿ ಹೋರಾಟಕ್ಕೆ ಮುಂದಾಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.