ಶಹಾಪೂರ:ಸೆ.24:ಪದವಿ ಪೂರ್ವ ಶಿಕ್ಷಣದ ವಿದ್ಯಾರ್ಥಿಗಳ ಬದುಕಿಗೆ ಹೊಸ ತಿರುವು ನೀಡುವ ಪ್ರಮುಖ ಹಂತವಾಗಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಧ್ಯಯನಶೀಲರಾದರೆ ಉಜ್ವಲ ಭವಿಷ್ಯ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಾಹಿತಿ ಹಾಗೂ ರಂಗಂಪೇಟೆಯ ಡಾ. ಬಿ.ಆರ್. ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರದ ಉಪನ್ಯಾಸಕ ಶರಣುಗೌಡ ಪಾಟೀಲ್ ಜೈನಾಪುರ ಅವರು ಅಭಿಪ್ರಾಯಪಟ್ಟರು.
ನಗರದ ಚರಬಸವೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಪ್ರಸಕ್ತ ಶೈಕ್ಷಣಿಕ ಸಾಲಿನ ಸಾಂಸ್ಕøತಿಕ, ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಹಾಗೂ ಪಿ.ಯು.ಸಿ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಂಡು ಒಳ್ಳೆಯ ವ್ಯಕ್ತಿತ್ವವನ್ನು ನಿರ್ಮಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕೆಂದು ತಿಳಿಸಿದರು.
ಬಿ.ಡಿ.ಎಮ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಶಿವಲಿಂಗಣ್ಣ ಸಾಹು ಅವರು ಮಾತನಾಡಿ ಕಾಲೇಜಿನ ಶೈಕ್ಷಣಿಕ ಪರಿಸರದ ಸೌಲಭ್ಯಗಳನ್ನು ಪಡೆದುಕೊಂಡು ವಿದ್ಯಾರ್ಥಿಗಳು ಜ್ಞಾನಾರ್ಜನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಧರ್ಮಣ್ಣಗೌಡ ಬಿರಾದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಾಂಸ್ಕøತಿಕ ಸಂಚಾಲಕ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕ ಶೇಕಪ್ಪ ವಾರಿ ಪ್ರಾಸ್ತವಿಕ ಮಾತನಾಡಿದರು. ಈ ಸಂದರ್ಭದಲ್ಲಿ ಮುಖ್ಯಗುರು ಭಾಗಪ್ಪ ಸಿ., ಉಪನ್ಯಾಸಕರಾದ ನಿರ್ಮಲಾ ತುಂಬಗಿ, ಸಿದ್ಧಣ್ಣ ನೀರಲಗಿ, ಅನಿತಾ ಕೊಲ್ಲೂರು, ಭೀಮರಾಯ ದೊರೆ, ರಾಜೇಶ್ವರಿ ಬಬಲಾದಿ, ತಾಯೇರಾ ಬೇಗಂ, ಭೀಮನಗೌಡ ಕೌಲಗಿ, ಸತೀಶ ತುಳೇರ ಮುಂತಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಜ್ಯೋತಿ ಯಂಕಂಚಿ, ನಂದಿನಿ ನಿರೂಪಿಸಿದರು. ಕು. ಅಕ್ಕನಾಗಮ್ಮ ಸ್ವಾಗತಿಸಿದರು. ಕು. ಭಾಗ್ಯಶ್ರೀ ಅತಿಥಿಗಳನ್ನು ಪರಿಚಯಿಸಿದರು. ಕು. ಪ್ರೀತಿ ವಂದಿಸಿದರು. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಛದ್ಮವೇಷದಲ್ಲಿ ಕು. ಭಾಗ್ಯಶ್ರೀ ಗಮನ ಸೆಳೆದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಚಟುವಟಿಕೆಗಳು ಜರುಗಿದವು.