
ಹಿರಿಯೂರು ಮಾ: 6- ಶಿಕ್ಷಣವೇ ಶಕ್ತಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆಯುವ ಮೂಲಕ ದೇಶದ ಉತ್ತಮ ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಶಿಕ್ಷಣ ತಜ್ಞರಾದ ಹೆಚ್ ಎನ್ ನರಸಿಂಹಯ್ಯ ಹೇಳಿದರು. ನಗರದ ಗುರುಕುಲ ಟ್ಯುಟೋರಿಯಲ್ಸ್ ವತಿಯಿಂದ ಆಯೋಜಿಸಿದ್ದ ನವೋದಯ ಮತ್ತು ಮೊರಾರ್ಜಿ ಶಾಲೆಗಳ ತರಬೇತಿ ಕಾರ್ಯಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಹಿತಿ ಎಂ ಕಿರಣ್ ಮಿರಜ್ಕರ್ ಮಾತನಾಡಿ ಶಿಕ್ಷಕರು ಎಲ್ಲ ವಿದ್ಯಾರ್ಥಿಗಳಿಗೂ ಒಂದೇ ರೀತಿಯ ಪಾಠ ಮಾಡುತ್ತಾರೆ ಆದರೆ ವಿದ್ಯಾರ್ಥಿಗಳು ಗಮನ ನೀಡಿ ಆಸಕ್ತಿಯಿಂದ ಶಿಕ್ಷಣ ಕಲಿಯಬೇಕು ಉತ್ತಮ ಅಂಕಗಳಿಸಲು ಪ್ರಯತ್ನಿಸಬೇಕುಎಂದು ತಿಳಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಿವೃತ್ತ ಶಿಕ್ಷಕರಾದ ಪಾಂಡುರಂಗಯ್ಯ, ಗುರುಕುಲ ಟುಟೋರಿಯಲ್ಸ್ ನ ಮುಖ್ಯಸ್ಥರಾದ ಅನಿಲ್ ಕುಮಾರ್ ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.