ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಿರಿ : ಕೆ ವಿ ಅಮರೇಶ್ 

ಸಂಜೆವಾಣಿ ವಾರ್ತೆ

ಹಿರಿಯೂರು.ಜ.೩೧ :  ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಮೂಲಕ  ಸುಶಿಕ್ಷಿತರಾಗಿ ದೇಶದ ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ವಾಗ್ದೇವಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಕೆ.ವಿ ಅಮರೇಶ್ ಹೇಳಿದರು ವಾಗ್ದೇವಿ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ವಾಗ್ದೇವಿ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು  ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ಹೇಳಿಕೊಡುವ ಪಾಠ ಪ್ರವಚನಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು. ಶಾಲೆಯಲ್ಲಿ ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಅನೇಕ ಕಾರ್ಯಕ್ರಮಗಳನ್ನು ಆಯುಸುತ್ತಿದ್ದೇವೆ, ಇದರ ಸದುಪಯೋಗ ಪಡೆದುಕೊಳ್ಳಿ ಎಂದರು ನಮ್ಮ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟಗಳಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ಹೆಸರುಗಳಿಸಿದ್ದಾರೆ ಹಾಗೂ ಉನ್ನತ ಅಧಿಕಾರಿ ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಇದು ಹೆಮ್ಮೆಯ ವಿಷಯ ಎಂದರು.ನಗರಸಭೆ ಸದಸ್ಯರಾದ  ಆರ್.ಅಜಯ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು ಕಾರ್ಯಕ್ರಮದಲ್ಲಿ ವಾಗ್ದೇವಿ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಕಾರ್ಯದರ್ಶಿ ಆರ್ ಪ್ರಕಾಶ್ ಕುಮಾರ್ ಕಾರ್ಯದರ್ಶಿ ಕೆ.ಜಿ ಶ್ರೀಧರ್ ಮಾಜಿ ಅಧ್ಯಕ್ಷರಾದ ಟಿ ಎಸ್ ಕೃಷ್ಣಮೂರ್ತಿ ವಾಸವಿ ಯುವಜನ ಸಂಘದ ಅಧ್ಯಕ್ಷರಾದ ವಿ. ಜಗದೀಶ್ ಆರ್ಯ ವೈಶ್ಯ ಮಂಡಳಿ ಕಾರ್ಯದರ್ಶಿ ಪಿ.ವಿ ನಾಗರಾಜ್ ರಾಜೇಶ್ ಕೃಷ್ಣಮೂರ್ತಿ ಹಾಗೂ ಮುಖ್ಯ ಶಿಕ್ಷಕ ರಾದ ಶರಣಪ್ಪ, ಸುಮಿತ್ರ, ದಿಲೀಪ್, ಮತ್ತು ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಅನೇಕ ಮುಖಂಡರು ಪಾಲ್ಗೊಂಡಿದ್ದರು