ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡು ಮಾನಸಿಕ ಹಾಗೂ ದೈಹಿಕ ಸಾಮಥ್ರ್ಯ ಹೊಂದಿ

ಸಂಜೆವಾಣಿ ವಾರ್ತೆ
ಚಾಮರಾಜನಗರ ಆ.20:- ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಮಾನಸಿಕ ಹಾಗೂ ದೈಹಿಕ ಸಾಮಥ್ರ್ಯ ಹೊಂದಲು ಸಾಧ್ಯಎಂದುಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಅಧಿಕಾರಿ ರಾಜೇಂದ್ರಪ್ರಸಾದ್ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಡಿ, ದೇವರಾಜಅರಸುಅವರ 108ನೇ ಜನ್ಮ ದಿನಾಚರಣೆ ಪ್ರಯುಕ್ತಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಹಸಿರು ಬಾವುಟ ಬೀಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳು ಆಟೋಟಗಳಲ್ಲಿ ತೊಡಗಿಸಿಕೊಂಡರೆ ಉತ್ತಮ ಆರೋಗ್ಯವಂತರಾಗಬಹುದು ಹೀಗಾಗಿ ಕ್ರೀಡಾಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಜಿಲ್ಲೆಗೆಕೀರ್ತಿತರಬೇಕೆಂದು ಸಲಹೆ ನೀಡಿದರು.
ಹಾಸ್ಟಲ್ ವಿದ್ಯಾರ್ಥಿಗಳಿಗೆ 100 ಹಾಗೂ 400 ಮೀಟರ್‍ಓಟದ ಸ್ಪರ್ಧೆ, ಲಾಂಗ್‍ಜಂಪ್, ಹೈಜಂಪ್, ಶಾಟ್‍ಬೂಟ್, ಅಲ್ಲದೇ ಸಾಂಸ್ಕøತಿಕ ಕಾರ್ಯಕ್ರಮಗಳಾದ ದೇಶಭಕ್ತಿಗೀತೆ,ಜನಪದಗೀತೆ, ಪ್ರಬಂಧ ಸ್ಪರ್ಧೆ, ರಸಪ್ರೆಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಆ.22 ರಂದು ನಡೆಯುವ ಡಿ, ದೇವರಾಜಅರಸುಅವರ 108ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದುಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಸಿಎಂ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕ ಎಂ.ಕುಮಾರ್, ಲೆಕ್ಕಾಧಿಕ್ಷಕ ರಾಜಣ್ಣ, ತೆರಕಣಾಂಬಿ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಮಹದೇವ ಪ್ರಸಾದ್, ತಾಲೂಕು ಅಧಿಕಾರಿಗಳಾದ ಮೋಹನ್‍ರಾಜ್, ದಿಲೀಪ್‍ಕುಮಾರ್, ಬಸವರಾಜು ಇತರರು ಇದ್ದರು.