ವಿದ್ಯಾರ್ಥಿಗಳು ಭವ್ಯ ಭಾರತ ಕಟ್ಟುವ ನಿಟ್ಟಿನಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ನಡೆಯಿರಿಃ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ಎನ್.ನಾಯಕ್

ವಿಜಯಪುರ, ನ.15: ಇಂದಿನ ಮಕ್ಕಳೇ ಮುಂದಿನ ಭವ್ಯ ಭಾರತದ ಪ್ರಜೆಗಳಾಗಿದ್ದು, ಭವ್ಯ ಭಾರತ ಕಟ್ಟುವ ನಿಟ್ಟಿನಲ್ಲಿ ದಿಟ್ಟ ಗುರಿಯೊಂದಿಗೆ ಶಿಕ್ಷಕರ ಮಾರ್ಗದರ್ಶನದಲ್ಲಿ ತಮ್ಮ ಶಿಕ್ಷಣವನ್ನು ಪೂರೈಸಬೇಕು. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆಯಿಂದ ಹಾಗೂ ಸಮಚಿತ್ತದಿಂದ ಅಧ್ಯಯನ ನಡೆಸಿ ಯಶಸ್ಸಿನೆಡೆಗೆ ಸಾಗಬೇಕು ಎಂದು ಮಾನ್ಯ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ಎನ್, ನಾಯಕ್ ಅವರು ಹೇಳಿದರು.
ನಗರದ ಪಿ,ಡಿ,ಜೆ ಶಾಲೆಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಇಂದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಿಜಯಪೂರ ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆ ಹಾಗೂ 75ನೇ ವರ್ಷದ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಯೋಜಿಸಲಾದ ಕಾರ್ಯಕ್ರಮಗಳ ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅದರಂತೆ ಜೀವನದಲ್ಲಿ ತಾಳ್ಮೆ ಅತ್ಯಂತ ಮುಖ್ಯವಾಗಿದ್ದು, ಸಂಯಮದಿಂದ ವರ್ತಿಸಬೇಕು, ಪ್ರತಿಯೊಬ್ಬರು ಕಾನೂನನ್ನು ಗೌರವಿಸಬೇಕು ಅಂದಾಗ ಮಾತ್ರ ಕಾನೂನಿನಿಂದ ರಕ್ಷಣೆ ಪಡೆಯಲು ಸಾಧ್ಯ. ಯಾವುದೇ ಕಾರಣಕ್ಕೂ ಕಾನೂನಿನ ಉಲ್ಲಂಘನೆ ಮಾಡಬಾರದು ಎಂದು ಕಿವಿಮಾತು ಹೇಳಿದರು.
ಉಚಿತ ಕಾನೂನು ಸೇವೆಗಳ ಸೌಲಭ್ಯವನ್ನು ಎಲ್ಲಾ ಮಕ್ಕಳು, ಮಹಿಳೆಯರು ಪಡೆದುಕೊಳ್ಳಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಉದ್ದೇಶಗಳನ್ನು ತಿಳಿಸಿದ ಅವರು ಈವರೆಗೂ 3300 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಮಕ್ಕಳಿಗೆ, ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ಹಾಗೂ ಎಲ್ಲಾ ವರ್ಗದ ನಾಗರಿಕರಿಗೆ ಯಶಸ್ವಿಯಾಗಿ ಜರುಗಿಸಲಾಗಿದೆ ಎಂದು ತಿಳಿಸಿದರು.
ಎಲ್ಲರ ಸಹಕಾರದೊಂದಿಗೆ ವಿಜಯಪೂರ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿಯೂ ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಎಲ್ಲಾ ಇಲಾಖೆಯ ಸಹಯೋಗ ಹಾಗೂ ಸಹಕಾರದೊಂದಿಗೆ 3300 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಮಕ್ಕಳಿಗೆ, ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ಹಾಗೂ ಎಲ್ಯಾ ವರ್ಗದ ನಾಗರಿಕರಿಗೆ ಯಶಸ್ವಿಯಾಗಿ ಜರುಗಿಸಲಾಗಿದ್ದು, ಇದಕ್ಕೆ ಸಹಕರಿಸಿದ ಎಲ್ಲಾ ಇಲಾಖೆಯವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದರು. .
ನಂತರ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ, ಆನಂದಕುಮಾರ ಅವರು ಮಾತನಾಡಿ ಮಕ್ಕಳು ತಮ್ಮ ಓದಿನ ಕಡೆಗೆ ಹೆಚ್ಚಿನ ಗಮನ ಕೊಡಬೇಕು, ಮೊಬೈಲ್ ಹಾಗೂ ಸಿನೆಮಾಗಳಲ್ಲಿ ಬರುವ ಕೆಟ್ಟ ಸಂದೇಶಗಳಿಗೆ ಬೆಲೆ ಕೊಡದೆ ಹಾಗೂ ಪ್ರಭಾವಕ್ಕೊಳಗಾಗದೆ ಶ್ರಮವಹಿಸಿ ವಿದ್ಯಾಭ್ಯಾಸ ಮಾಡಿ ತಂದೆ-ತಾಯಿಗಳಿಗೆ, ನಮ್ಮ ಊರು, ರಾಜ್ಯ ರಾಷ್ಟ್ರಕ್ಕೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ 75 ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಕಾನೂನುಗಳ ಬಗ್ಗೆ, ಮಕ್ಕಳ ಹಕ್ಕುಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವುದಕ್ಕಾಗಿ ಮಕ್ಕಳ ಜಾಥಾವನ್ನು ಸಹಿತ ನೆರವೇರಿಸಿ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಗೋವಿಂದರೆಡ್ಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಣ್ಣ ಬ, ಹೊಸಮನಿ, ಸರ್ಕಾರಿ ಅಭಿಯೋಜಕರಾದ ಕೆ.ಕೆ, ಕುಲಕರ್ಣಿ, ಡಿಡಿಪಿಐ ಎನ್, ವಿ, ಹೊಸೂರ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಸೇರಿದಂತೆ ಪಿಡಿಜೆ ಹೈಸ್ಕೂಲ್, ಕಾಲೇಜಿನ ಪ್ರಾಚಾರ್ಯರು, ಶಿಕ್ಷಕ, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.