ವಿದ್ಯಾರ್ಥಿಗಳು ಮಾದಕ ವಸ್ತುಗಳ ಜಾಗೃತೆ ಅಗತ್ಯ

ಕೋಲಾರ,ಜೂ.೨೯: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಸ್.ಎಫ್.ಎಸ್ ಪದವಿಪೂರ್ವ ಕಾಲೇಜ್ ಇವರ ಸಹಯೋಗದೊಂದಿಗೆ ಎಸ್.ಎಫ್.ಎಸ್ ಪದವಿ ಪೂರ್ವ ಕಾಲೇಜು ಟಮಕದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕಾಲೇಜು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ ಎಸ್ ಹೊಸಮನಿ ಉದ್ಘಾಟಿಸಿದರು.
ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ತಂಬಾಕು ಹಾಗೂ ಮಾದಕ ವಸ್ತುಗಳ ನಿಯಂತ್ರಣ ಕಾನೂನು ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವಂತಹ ದುಷ್ಪರಿಣಾಮಗಳ ಕುರಿತು ಅರಿವು ಮತ್ತು ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮ ಆಯೋಜಿಸುವ ಮುಖಾಂತರ ವಿದ್ಯಾರ್ಥಿಗಳು ತಂಬಾಕು ವ್ಯಸನಕ್ಕೆ ಬಲಿಯಾಗದಂತೆ ತಿಳಿವಳಿಕೆ ಮೂಡಿಸಲಾಯಿತು. ಮಾರ್ಗಸೂಚಿಗಳನ್ವಯ ಕಾಲೇಜುನ್ನು ತಂಬಾಕು ಮುಕ್ತ ಕಾಲೇಜನ್ನಾಗಿ ಘೋಷಿಸಲು ಸಲಹೆ ನೀಡಲಾಯಿತು.
ಸಂದರ್ಭದಲ್ಲಿ ಜಿಲ್ಲಾ ಸಮಾಲೋಚಕ ಪಿ ಮಹಮದ್, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಆಪ್ತ ಸಮಾಲೋಚಕ ಮಂಜುನಾಥ ಜಿ.ಎನ್, ಶಶಿಕುಮಾರ್, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.