ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಗೆ ಶ್ರಮಿಸಲು ಕರೆ

ಬೈಲಹೊಂಗಲ,ಜು6 : ಇಂದಿನ ಯುವಜನತೆ ಪುಸ್ತಕಕ್ಕೆ ಸೀಮಿತವಾಗಿದ್ದು, ಸಮಾಜದಲ್ಲಿನ ವಿಚಾರಗಳನ್ನು ಅರಿಯದೇ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿ ವಿಚಲಿತರಾಗುತ್ತಿದ್ದಾರೆ. ಕಾಲೇಜು ಸಂದರ್ಭದಲ್ಲಿ ಉತ್ತಮ ಸ್ನೇಹ ಗಳಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದಾಗಿದೆ ಎಂದು ಬೆಳಗಾವಿ ಜಿ ಪಂ ಸಿಇಓ ಹ?ರ್Àಲ್ ಭೋಯಾರ್ ಹೇಳಿದರು.
ಅವರು ಪಟ್ಟಣದ ಅಂಬೇಡ್ಕರ ಉದ್ಯಾನವನ ಹತ್ತಿರದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ್ 2023-24ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕ್ರೀಡೆ ಮತ್ತು ಸಂಸ್ಕøತಿಕ ಇಎಲ್‍ಸಿ ಹಾಗೂ ಎನ್ ಎಸ್ ಎಸ್ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್‍ಸಿ ಕ್ಲಬ್ ನ ಮಹತ್ವ ಹಾಗೂ ಎನ್ ಎಸ್ ಎಸ್ ನ ಕಾರ್ಯ ಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದರು.
ಶಾಸಕ ಮಹಾಂತೇಶ ಕೌಜಲಗಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಪ್ರಾಚಾರ್ಯ ಬಸವರಾಜ ಕುರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಶೋಕ ವಾಲಿ, ಅಭಿವೃದ್ದಿ ಸಮಿತಿಯ ಸರ್ವ ಸದಸ್ಯರು, ಉಪನ್ಯಾಸಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಇದ್ದರು.