ವಿದ್ಯಾರ್ಥಿಗಳು, ಸಾರ್ವಜನಿಕರಿಂದ ಸಾಮೂಹಿಕ ಕನ್ನಡ ಗೀತೆಗಳ ಗಾಯನ

ಚಿತ್ರದುರ್ಗ,ಅ.28;ಕನ್ನಡ ರಾಜ್ಯೋತ್ಸವದ ನಿಮಿತ್ತ “ಕನ್ನಡಕ್ಕಾಗಿ ನಾವು” ಅಭಿಯಾನದ ಅಂಗವಾಗಿ ಗುರುವಾರ ಜಿಲ್ಲೆಯಾದ್ಯಂತ 13 ಸ್ಥಳಗಳಲ್ಲಿ ಸಾಮೂಹಿಕ ಕನ್ನಡ ಗೀತೆಗಳ ಗಾಯನ ನಡೆಯಿತು.
 ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ “ಕನ್ನಡಕ್ಕಾಗಿ ನಾವು ಅಭಿಯಾನ” ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮವು ಜಿಲ್ಲೆಯಾದ್ಯಂತ 13 ಸ್ಥಳಗಳಲ್ಲಿ ಸಾಮೂಹಿಕ ಗೀತ ಗಾಯನ ನಡೆಯಿತು. ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಾಲಾ-ಕಾಲೇಜುಗಳ ಆವರಣ, ಐತಿಹಾಸಿಕ ಕೋಟೆಯ ಆವರಣದ ಮುಂದೆ ನಿಂತು ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರಿಂದ ಸಾಮೂಹಿಕವಾಗಿ ಕನ್ನಡ ಗೀತೆಗಳ ಗಾಯನ ಮಾಡಲಾಯಿತು.  
ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮದಲ್ಲಿ ನಾಡಗೀತೆಯೂ ಸೇರಿದಂತೆ ಕನ್ನಡ ನಾಡು-ನುಡಿ, ಸಂಸ್ಕøತಿಯ ವೈಭವ, ಕನ್ನಡದ ಶ್ರೇಷ್ಠತೆ ಸಾರುವಂತಹ ಡಾ.ಕುವೆಂಪುರವರ “ಬಾರಿಸು ಕನ್ನಡ ಡಿಂಡಿಮವ, ಡಾ.ಕೆ.ಎಸ್.ನಿಸಾರ್ ಅಹಮದ್ ಅವರ “ಜೋಗದ ಸಿರಿ ಬೆಳಕಿನಲ್ಲಿ” ಹಾಗೂ ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಎಂಬ ಮೂರು ಹಾಡುಗಳನ್ನು ಗಾಯನ ಮಾಡಿದ ನಂತರ ಚಿತ್ರದುರ್ಗ ಜಿಲ್ಲೆಯ ಶ್ರೇಷ್ಠತೆಯನ್ನು ಸಾರುವ ನಾಗರಹಾವು ಚಲನಚಿತ್ರದ ಗೀತೆ “ಕನ್ನಡ ನಾಡಿನ ವೀರರಮಣಿಯ” ಗೀತೆಯನ್ನು ಹಾಡಲಾಯಿತು.
ಜಿಲ್ಲೆಯಾದ್ಯಂತ 13 ಸ್ಥಳಗಳಲ್ಲಿ ಸಾಮೂಹಿಕ ಗಾಯನ: ಚಿತ್ರದುರ್ಗ ಜಿಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ, ಚಿತ್ರದುರ್ಗ ಕೋಟೆ ಮುಂಭಾಗ, ಚಿತ್ರದುರ್ಗ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಚಿತ್ರದುರ್ಗ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸದುರ್ಗ ಸರ್ಕಾರಿ ಪದವಿಪೂರ್ವ ಕಾಲೇಜು, ಮೊಳಕಾಲ್ಮುರು ಸರ್ಕಾರಿಪದವಿಪೂರ್ವ ಕಾಲೇಜು, ಹೊಳಲ್ಕೆರೆ ಸರ್ಕಾರಿ ಪದವಿಪೂರ್ವ ಕಾಲೇಜು, ಚಳ್ಳಕೆರೆ ಸರ್ಕಾರಿ ಪದವಿಪೂರ್ವ ಕಾಲೇಜು, ಹಿರಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು, ಚಿತ್ರದುರ್ಗ ಎಸ್‍ಆರ್‍ಎಸ್ ಕಾಲೇಜು, ಎಸ್‍ಜೆಎಂಐಟಿ ಕಾಲೇಜು, ಅರವಿಂದ ಗಾರ್ಮೆಂಟ್ಸ್, ತಳಕು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಾಗೂ ಜಿಲ್ಲೆಯ 24 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಂದ ಸಾಮೂಹಿಕವಾಗಿ ಕನ್ನಡ ಗೀತೆ ಗಾಯನ ಕಾರ್ಯಕ್ರಮ ನಡೆಯಿತು.