ವಿದ್ಯಾರ್ಥಿಗಳ ಗುರಿ ಸಾದನೆಯೆಡೆಗೆ ಮುಖ ಮಾಡಿರಲಿ


ಧಾರವಾಡ,ಆ.13: ಪದವಿ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯದಲ್ಲಿ ಉನ್ನತ ಅವಕಾಶಗಳಿಗೆ ರಹದಾರಿಯಾಗಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಸಮಯ ಪ್ರಜ್ಞೆ ಮತ್ತು ಶಿಸ್ತು ಅವಶ್ಯಕ ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಪ್ರತಿಷ್ಠಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕಾಲೇಜಿನ 2022-23ನೇ ಶೈಕ್ಷಣಿಕ ಸಾಲಿನ ಪಠ್ಯತೇರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಜೀವನದಲ್ಲಿ ಅಮೂಲ್ಯವಾದ ಶಿಕ್ಷಣವೆಂದರೆ ಅದು ಪದವಿ ಶಿಕ್ಷಣ ವಾಗಿರುತ್ತದೆ. ಕಲಿಕೆಯ ಜೊತೆಗೆ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳಲು ಕಾಲೇಜು ಶಿಕ್ಷಣದಲ್ಲಿ ಅನೇಕ ಅವಕಾಶಗಳಿವೆ. ಆಟ-ಪಾಠದ ಜೊತೆಗೆ ಜೀವನದ ಪಾಠವನ್ನು ಕಲಿಯಬೇಕಾಗಿರುವುದು ಇಂದು ಅಗತ್ಯವಾಗಿದೆ. ವಿದ್ಯಾರ್ಥಿ ದೆಸೆಯಲ್ಲಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಗುರುಹಿರಿಯರ ಮಾರ್ಗದರ್ಶನವನ್ನು ಪಡೆದು ಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗಬೇಕು. ಮೊಬೈಲ್ ಬಳಕೆ ವಿದ್ಯಾರ್ಥಿಗಳು ತಮ್ಮ ವಿದ್ಯಾ ಭ್ಯಾಸಕ್ಕೆ ಸರಿಯಾಗಿ ಬಳಕೆ ಮಾಡಿ. ಸಿಕ್ಕ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಿ ಎಂದು ಅವರು ವಿದ್ಯಾರ್ಥಿಗಳಿಗೆ ಹೇಳಿದರು.

ಸತತ ಅಬ್ಯಾಸದಿಂದ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ, ಸದೃಢ ದೇಶವನ್ನು ಕಟ್ಟಲು ವಿದ್ಯಾರ್ಥಿಗಳ ಪಾತ್ರ ಬಹು ದೊಡ್ಡದು. ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿರಲಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಅವರು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪೆÇ್ರ.ನಳಿನಿ ಬೆಂಗೇರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಡಾ.ಬಿ.ಎಸ್.ತಲ್ಲೂರ, ಶಿವಾನಂದ ನರಹಟ್ಟಿ,
ವಿದ್ಯಾ ರಾಯ್ಕರ್, ಸಂಜೋತಾ ಶಿರಸಂಗಿ, ಡಾ.ದಯಾನಂದ ಲಾಳಸಂಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಡಾ.ಗಿರೀಶ ದೇಸೂರ ಕಾರ್ಯಕ್ರಮ ನಿರೂಪಿಸಿದರು, ಡಾ. ಬಸವರಾಜೇಶ್ವರಿ ಪಾಟೀಲ್ ಪ್ರಾಸ್ತವಿಕ ವಾರ್ಷಿಕ ವರದಿ ಮಂಡಿಸಿದರು , ಡಾ.ಜಿ.ಕೆ.ಬಡಿಗೇರ ಸ್ವಾಗತಿಸಿದರು, ಡಾ.ಅರುಣ ಕಲ್ಲೋಳಿಕರ ವಂದಿಸಿದರು.