
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜು.02: ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣ ಮತ್ತು ಕ್ರೀಡೆ ಅವಿಭಾಜ್ಯ ಅಂಗಗಳಾಗಿವೆ ಎಂದು ಶಾಸಕ ಹೆಚ್.ಟಿ.ಮಂಜು ಅಭಿಪ್ರಾಯಪಟ್ಟರು.
ಅವರು ತಾಲ್ಲೂಕಿನ ಶೀಳನೆರೆ ಹೋಬಳಿಯ ಸಿಂಧಘಟ್ಟ ಗ್ರಾಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ರಾಯಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಏರ್ಪಡಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉಧ್ಘಾಟಿಸಿ ಮಾತನಾಡಿದರು.
ಶಿಕ್ಷಣದ ಮೂಲಕ ಮಕ್ಕಳ ಬೌದ್ದಿಕ ಬೆಳವಣಿಗೆಯಾದರೆ ಕ್ರೀಡೆ ಮಕ್ಕಳ ದೈಹಿಕ ಆರೋಗ್ಯವನ್ನು ಅಭಿವೃದ್ದಿ ಪಡಿಸುತ್ತದೆ. ಭೌದ್ದಿಕ ಮತ್ತು ಮಾನಸಿಕ ಆರೋಗ್ಯದ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಲಿದೆ ಎಂದ ಹೆಚ್.ಟಿ.ಮಂಜು ಮಕ್ಕಳು ಶಿಕ್ಷಣದ ಜೊತೆಗೆ ಕ್ರೀಡೆ, ವ್ಯಾಯಾಮ, ಯೋಗ ಸೇರಿದಂತೆ ವಿವಿಧ ಬಗೆಯ ಹವ್ಯಾಸಗಳನ್ನು ಮೈಗೂಡಿಸಿಕೊಂಡಾಗ ಜೀವನದಲ್ಲಿ ಏನಾದರೂ ಸಾಧನೆ ಮಾಡಬಹುದು. ನಾನೂ ಸಹ ವಿದ್ಯಾರ್ಥಿ ಜೀವನದಲ್ಲಿ ವಾಲಿಬಾಲ್ ಹಾಗೂ ಕಬ್ಬಡ್ಡಿ ಆಟಗಾರನಾಗಿದ್ದೆ ಎಂದರು.
ದೇಶದಲ್ಲಿಂದು ಕ್ರೀಡಾ ಕ್ಷೇತ್ರ ಪ್ರಗತಿ ಕಾಣುತ್ತಿದೆ. ಕ್ರೀಡಾಪಟುಗಳಿಗೂ ಸೂಕ್ತ ಪೆÇ್ರೀತ್ಸಾಹ ದೊರಕುತ್ತಿದೆ. ಆದರೆ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ದೊರಕುತ್ತಿರುವ ಪೆÇ್ರೀತ್ಸಾಹ ಮತ್ತು ತರಬೇತಿ ಗ್ರಾಮೀಣ ಮಕ್ಕಳಿಗೆ ದೊರಕುತ್ತಿಲ್ಲ. ಶಾಲಾ ಹಂತದಲ್ಲಿ ಹೋಬಳಿ, ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳನ್ನು ನಡೆಸುತ್ತಿದ್ದರೂ ಬಹುತೇಕ ಶಾಲಾ ಕಾಲೇಜುಗಳಲ್ಲಿ ಸೂಕ್ತ ಆಟದ ಮೈದಾನ, ಕ್ರೀಡಾ ಪರಿಕರಗಳ ಕೊರತೆ ಮತ್ತು ದೈಹಿಕ ಶಿಕ್ಷಕರ ಕೊರತೆ ಕಾಡುತ್ತಿದೆ. ಪೆÇೀಷಕರು ಮಕ್ಕಳಿಗೆ ಕಲಿಕೆಗೆ ನೀಡುವ ಆದ್ಯತೆಯನ್ನು ಕ್ರೀಡಾ ಚಟುವಟಿಕೆಗಳ ಉತ್ತೇಜನಕ್ಕೆ ತೋರಿಸುತ್ತಿಲ್ಲ. ವಿದ್ಯಾರ್ಥಿಗಳು ಕಲಿಕೆಗೆ ನಿಡುವಷ್ಟೇ ಆದ್ಯತೆಯನ್ನು ಕ್ರೀಡಾ ಚಟುವಟಿಕೆಗಳಿಗೂ ನಿಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದಲ್ಲ ಒಂದು ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವಂತಾಗಬೇಕು. ಸೋಲು ಗೆಲುವುಗಳೆರಡನ್ನೂ ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ಕ್ರೀಡೆಗಳಿಂದ ಮಾತ್ರ ದೊರಕುತ್ತದೆ. ಸೋಲನ್ನೆ ಗೆಲುವಿನ ಮೆಟ್ಟಿಲಾಗಿಸಿಕೊಂಡು ಪುಟಿದೇಳುವ ಮನಸ್ಸು ಕ್ರೀಡಾ ಪಟುವಾದವನಿಗೆ ಮಾತ್ರ ಇರುತ್ತದೆ ಎಂದ ಶಾಸಕ ಹೆಚ್.ಟಿ.ಮಂಜು ಇಂದು ನೂರಾರು ವಿಭಾಗದ ಕ್ರೀಡೆಗಳಲ್ಲಿ ವಿಫುಲವಾದ ಅವಕಾಶಗಳಿವೆ. ಅವುಗಳನ್ನು ಬಳಸಿಕೊಂಡು ಸಾಧನೆ ಮಾಡಬೇಕು. ನಾನು ಕ್ರೀಡಾಪಟುಗಳ ಸಾಧನೆಗೆ ಅಗತ್ಯ ನೆರವು ನೀಡಲು ಸಿದ್ದನಿದ್ದೇನೆ. ಕಳೆದ ಹಲವಾರು ವರ್ಷಗಳಿಂದಲೂ ತಾಲ್ಲೂಕಿನಲ್ಲಿ ನಡೆಯುವ ಕ್ರೀಡಾಕೂಟಗಳಿಗೆ ಬಹುಮಾನ ನೀಡುವ ಮೂಲಕ ಅವರುಗಳನ್ನು ಉತ್ತೇಜಿಸುವ ಕೆಲಸ ಮಾಡಿದ್ದೇನೆ. ಮುಂದೆಯೂ ಮಾಡಲಿದ್ದೇನೆ ಎಂದರು.
ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷೆ ರಮ್ಯ, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಭುಕುಮಾರ್, ಶಿಕ್ಷಣ ಸಂಯೋಜಕ ಮೋಹನ್ ಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಪಿ.ಜೆ.ಕುಮಾರ್, ಹಿರಿಯ ಉಪಾದ್ಯಕ್ಷ ಎಸ್.ಆರ್.ಆನಂದ್ ಕುಮಾರ್, ಸೇರಿದಂತೆ ಶೀಳನೆರೆ ಹೋಬಳಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಜರಿದ್ದರು.