ವಿದ್ಯಾರ್ಥಿಗಳ ಜೀವನದಲ್ಲಿ ಗುರಿ ಇರಬೇಕು: ನ್ಯಾ.ಎಸ್.ಕೆ ಕನಕಟ್ಟೆ

ಬೀದರ: ಫೆ.4: ವಿದ್ಯಾರ್ಥಿಗಳ ಜೀವನದಲ್ಲಿ ಗುರಿ ಇದ್ದರೆ ಮಾತ್ರ ಜೀವನದಲ್ಲಿ ಸಾಧನೆ ಮಾಡಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಸ್.ಕೆ. ಕನಕಟ್ಟೆ ಹೇಳಿದರು.
ಅವರು ಶನಿವಾರ ಜಿಲ್ಲಾಡಳಿತ. ಜಿಲ್ಲಾ ಪಂಚಾಯತ. ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ. ಕಾನೂನು ಮಾಪನ ಶಾಸ್ತ್ರ ಇಲಾಖೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಬೀದರ ಇವರ ಸಹಯೋಗದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಘೋಡಂಪಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಂದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಲವಾರು ವಿಫುಲ ಅವಕಾಶಗಳಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಉಚಿತ ಕಾನೂನು ಅರಿವು ಮತ್ತು ನೆರವನ್ನು ನೀಡಲಾಗುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತುಬವಿದ್ಯಾರ್ಥಿಗಳು ಕಾನೂನಿನ ಕುರಿತು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಯಾವುದೇ ಖರ್ಚು ಮತ್ತು ವೆಚ್ಚಗಳಿಲ್ಲದೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜನರ ಸಮಸ್ಯೆಗಳಿಗೆ ಪರಿಹಾರಗಳನ್ನು ನೀಡಲಾಗುತ್ತದೆ. ಕೌಟುಂಬಿಕ ಹಾಗೂ ಇತರೆ ಯಾವುದೇ ಸಮಸ್ಯೆಗಳಿಗೆ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಜನರು ಸಹಾಯವನ್ನು ಪಡೆಯಬಹುದಾಗಿದೆ ಎಂದು ಹೇಳಿದರು.
ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಕವಿತಾ ಹುಷಾರೆ ಮಾತನಾಡಿ ಬಹಳಷ್ಟು ಗ್ರಾಹಕರಿಗೆ ಕಾನೂನಿನ ಅರಿವು ಇಲ್ಲದಿರುವುದರಿಂದ ಮೋಸ ಹೋಗುತ್ತಿದ್ದಾರೆ. ಹಾಗಾಗಿ ಕಾನೂನು ಅರಿವು ಅಗತ್ಯವಾಗಿದೆ. ಯಾವುದೇ ಸಮಯದಲ್ಲಿ ಗ್ರಾಹಕರು ಮೋಸ ಹೋಗಿದ್ದಾಗ ಸರಿಯಾದ ದಾಖಲೆಗಳೊಂದಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಬಂದರೆ ತಮಗೆ ನ್ಯಾಯ ಒದಗಿಸಲಾಗುತ್ತದೆ ಎಂದು ಹೇಳಿದರು.
ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೆಶಕರಾದ ಸುರೇಖಾ ಮಾತನಾಡಿ ಪ್ರತಿಯೊಂದು ವಿದ್ಯಾರ್ಥಿಗೆ ಕಾನೂನು ಅರಿವು ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ಇಂದು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಹಕರ ಹಕ್ಕುಗಳು. ಬಾಲ ಕಾರ್ಮಿಕ ಸಂರಕ್ಷಣೆ. ಪೆÇಸ್ಕೊ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.
ಇಂದು ಗ್ರಾಹಕರ ಸಂರಕ್ಷಣೆ ಕುರಿತು ಹಲವಾರು ಕಾಯ್ದೆ ಕಾನೂನುಗಳಿದ್ದು ಅವುಗಳ ಬಗ್ಗೆ ತಿಳಿದುಕೊಳ್ಳಬೇಕು. ಯಾವುದೇ ಒಂದು ವಸ್ತುವನ್ನು ಖರೀದಿಸುವ ಮುನ್ನ ಗ್ರಾಹಕರು ಅದರ ಕ್ವಾಲಿಟಿ ಮತ್ತು ಕ್ವಾಂಟಿಟಿ ಪರೀಕ್ಷೆ ಮಾಡಿ ಖರೀದಿಸಬೇಕು ಮತ್ತು ಮಾರಾಟಗಾರರು ತಮ್ಮ ವಸ್ತುವಿನ ಯಾವುದೇ ತೂಕ ಮತ್ತು ಅಳತೆಯಲ್ಲಿ ವ್ಯಾತ್ಯಾಸವಾಗದಂತೆ ನೋಡಿಕೊಳ್ಳಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಶರಣಪ್ಪ ಬಿರಾದಾರ. ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿ ರವಿ ಸೂರ್ಯನ. ಆಹಾರ ಸುರಕ್ಷತೆಯ ಅಧಿಕಾರಿ ಮನೋಹರ ಆಲಶೆಟ್ಟಿ. ಸಿದ್ದಮ್ಮ ಹಂಗರಗಿ. ಅರುಣ ಕುಮಾರ. ಕಾಲೇಜಿನ ಉಪನ್ಯಾಸಕರಾದ ಮಹೇಶ. ಪ್ರದೀಪ. ರಘುನಾಥ ರೆಡ್ಡಿ. ಸಂತೋಷ ಸೇರಿದಂತೆ ಘೋಡಂಪಳ್ಳಿ ವಸತಿ ಶಾಲಾ- ಮತ್ತು ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.