ಬಾದಾಮಿ,ಏ6: ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ. ವಿದ್ಯಾರ್ಥಿಗಳು ಕಷ್ಟ ಪಟ್ಟು ಓದಿ ಉತ್ತಮ ಅಂಕಗಳನ್ನು ಪಡೆದು ಸತ್ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಮಾಜಿ ಸಚಿವ, ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಬಿ.ಚಿಮ್ಮನಕಟ್ಟಿ ಹೇಳಿದರು.
ಅವರು ಪಟ್ಟಣದ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆಯ ಆಯುರ್ವೇದ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ನೂತನ ವಿದ್ಯಾರ್ಥಿಗಳ ಪರಿವರ್ತನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಆರ್.ಜಿ.ಯು.ಎಚ್.ಎಸ್.ಸೆನೆಟ್ ಸದಸ್ಯ ಡಾ.ಪ್ರಕಾಶ ತಾರಿವಾಳ ಮಾತನಾಡಿ ಆರ್.ಜಿ.ಯು.ಎಚ್.ಎಸ್.ವಿಶ್ವವಿದ್ಯಾಲಯವು ಹೊಸ ಹೊಸ ಸಂಶೋಧನೆಗಳಿಗೆ ಮಹತ್ವ ನೀಡುತ್ತಿದ್ದು, ಮಹಾವಿದ್ಯಾಲಯಗಳು ಇದನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು. ಸಂಸ್ಥೆಯ ಕಾರ್ಯದರ್ಶಿ ಭೀಮಸೇನ ಚಿಮ್ಮನಕಟ್ಟಿ, ಸಂಸ್ಥೆಯ ಮೆಡಿಕಲ್ ಡೈರಕ್ಟರ್ ಡಾ.ಬಸವರಾಜ ಕೋಲಾರ ಮಾತನಾಡಿದರು. ಇದೇ ಸಂದರ್ಭದಲ್ಲಿ ಡಾ.ಪ್ರಕಾಶ ತಾರಿವಾಳ, ನಿವೃತ್ತ ಪ್ರಾಚಾರ್ಯ ಡಾ.ರಾಮಚಂದ್ರ ನೇಸರಗಿ, ನೂತನ ಪ್ರಾಚಾರ್ಯ ಡಾ.ವಿರೇಂದ್ರ ಹಟ್ಟಿ ಇವರನ್ನು ಸನ್ಮಾನಿಸಿ, ಗೌರವಿಸಲಾಯಿತು. ವೇದಿಕೆಯ ಮೇಲೆ ಸಂಸ್ಥೆಯ ಆಡಳಿತಾಧಿಕಾರಿ ಸಂಗೀತಾ ಕೋಲಾರ, ವೈದ್ಯಕೀಯ ಅಧೀಕ್ಷಕ ಡಾ.ರಾಜೇಂದ್ರ ಮರಕುಂಬಿ, ಡಾ.ವಿ.ವೈ.ಭಾಗವತ ಹಾಜರಿದ್ದರು. ಡಾ.ಚಂದ್ರಶೇಖರ ಕಿರಗಿ ಸ್ವಾಗತಿಸಿದರು. ನೂತನ ಪ್ರಾಚಾರ್ಯ ಡಾ.ವಿರೇಂದ್ರ ಹಟ್ಟಿ ಪ್ರಾಸ್ಥಾವಿಕವಾಗಿ ಮಾತನಾಡಿದರು. ಡಾ.ಚಂದ್ರಶೇಖರ ಪಟ್ಟಣಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು, ಪಾಲಕರು ಉಪಸ್ಥಿತರಿದ್ದರು.