ಗದಗ,ಜೂ10 : ಪ್ರಸ್ತುತ ದಿನಗಳಲ್ಲಿ ಕಾನೂನು ತಿಳಿಯಲು ಅನೇಕ ಸೌಲಭ್ಯ ಲಭ್ಯವಿದ್ದು, ಇಂತಹ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕಾನೂನು ವಿದ್ಯಾರ್ಥಿಗಳು ಸಮಾಜಕ್ಕೆ ಒಬ್ಬ ಉತ್ತಮ ವಕೀಲರಾಗಿ ಸೇವೆಯನ್ನು ಸಲ್ಲಿಸಲು ಮುಂದಾಗಬೇಕು. ಕಾನೂನು ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದ್ದು, ಇದಕ್ಕೆ ಸಹಕಾರಿ ಎನ್ನುವಂತೆ ಪಾಲಕರು ಮತ್ತು ಪೆÇೀಷಕರು ಹಾಗೂ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳ ಬೆಳವಣಿಗೆಗೆ ಪೆÇ್ರೀತ್ಸಾಹ ನೀಡಬೇಕು ಎಂದು ವಿದ್ಯಾರ್ಥಿಗಳ ಪಾಲಕರ ಪ್ರತಿನಿಧಿ ಹಾಗೂ ಹಿರಿಯ ನ್ಯಾಯವಾದಿಗಳಾದ ಎಲ್.ಎಂ ಅಕ್ಕಿ ಹೇಳಿದರು.
ಶಹರದ ಕೆ.ಎಲ್.ಇ ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದಲ್ಲಿ ಜರುಗಿದ ಶಿಕ್ಷಕರ ಹಾಗೂ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು.
ವಕೀಲ ವೃತ್ತಿ ಶ್ರೇಷ್ಠ ವೃತ್ತಿಯಾಗಿದ್ದು, ಅದನ್ನು ವಕೀಲರು ಹಾಗೂ ಕಾನೂನು ಪದವಿಯನ್ನು ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಘನತೆಯಿಂದ ಕಾಪಾಡಿಕೊಂಡು ಹೋಗುವ ಮೂಲಕ ವೃತ್ತಿಯ ಗೌರವ ಹೆಚ್ಚಿಸುವದರ ಜತೆಗೆ ಸಮಾಜ ಮುಖಿಯಾಗಿ ಸೇವೆಯನ್ನು ಸಲ್ಲಿಸಬೇಕು. ಸುಮಾರು ಐದು ದಶಕಗಳಿಂದ ಕೆ.ಎಲ್.ಇ ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯವು ಗುಣ ಮಟ್ಟದ ಹಾಗೂ ಉತ್ತಮ ವಕೀಲರನ್ನು ಈ ಸಮಾಜಕ್ಕೆ ನೀಡುತ್ತಾ ಬರುತ್ತಿದೆ. ಅಲ್ಲದೇ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕಂಕಣ ಬದ್ಧರಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಪ್ರಸುತ್ತ ದಿನ ಮಾನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ವಕೀಲ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಕಾನೂನು ಕಾಲೇಜು ಕಡೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಲಿಕೆಗೆ ಆಸಕ್ತಿ ತೋರಿಸುತ್ತಿರುವುದು ಉತ್ತಮ ಸಮಾಜ ಹಾಗೂ ಗ್ರಾಮಗಳನ್ನು ನಿರ್ಮಾಣಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿ ಗೋಚರಿಸುತ್ತೇವೆ. ಆದ್ದರಿಂದ ಗ್ರಾಮೀಣ ಭಾಗದಿಂದ ಹಾಗೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಹಾಗೂ ಆಂಗ್ಲ ಮಾಧ್ಯಮದ ಇನ್ನೂ ಹೆಚ್ಚಿನ ಓದು ಕೌಶಲ್ಯ ಹಾಗೂ ತಂತ್ರಜ್ಞಾನದ ಬಳಕೆ ಮಾಡಿಕೊಂಡು ಕಾನೂನು ಮಾಹಿತಿಯನ್ನು ಪಡೆದುಕೊಳ್ಳುವಂತೆ ಉಪನ್ಯಾಸಕರು ಗಮನ ನೀಡಬೇಕು. ಕೇವಲ ಉಪನ್ಯಾಸಕರ ಮೇಲೆ ಜವಾಬ್ದಾರಿ ಹಾಕಿ ಪಾಲಕರು ಸುಮ್ಮನೆ ಕುಳಿತುಕೊಳ್ಳಬಾರದು ಕನಿಷ್ಠ ಎರಡ್ಮೂರು ತಿಂಗಳಿಗೊಮ್ಮೆ ಕಾಲೇಜಿಗೆ ಭೇಟಿ ನೀಡಿ ತಮ್ಮ ಮಕ್ಕಳ ವಿದ್ಯಾಭ್ಯಾಸದ ಮಾಹಿತಿ ಪಡೆದುಕೊಳ್ಳುತ್ತಿರಬೇಕು. ಅಲ್ಲದೇ ವಿದ್ಯಾರ್ಥಿಗಳಿಗೆ ಓದು ಹವ್ಯಾಸ ಬೆಳೆಸುವಂತಹ ವಾತಾವರಣವನ್ನು ಪಾಲಕರು ಮನೆಯಲ್ಲಿ ನಿರ್ಮಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪನ್ಯಾಸಕ ಎಸ್.ಟಿ. ಮೂರಶಿಳ್ಳಿನ ಮಾತನಾಡಿ, ಕಾನೂನು ಪದವಿಪಡೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕಾನೂನು ತಿಳಿದುಕೊಂಡರೆ ಉತ್ತಮ ವಕೀಲರಾಗಲು ಸಾಧ್ಯ. ವಿದ್ಯಾರ್ಥಿಗಳು ನ್ಯಾಯಾಲಯದ ಕಾರ್ಯಕಲಾಪಗಳಲ್ಲಿ ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿದ್ದಲ್ಲಿ ಮಾತ್ರ ವೃತ್ತಿಪರತೆ ಹೆಚ್ಚುತ್ತದೆ. ಜತೆಗೆ ತಮ್ಮ ವೃತ್ತಿಯಲ್ಲಿ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಹೆಚ್ಚು ಜ್ಞಾನವೃದ್ಧಿಯಾಗುತ್ತದೆ. ಇದಕ್ಕಾಗಿ ವಿದ್ಯಾರ್ಥಿಗಳ ಪಾಲಕರು ಮನೆಯಲ್ಲಿ ವಿದ್ಯಾರ್ಥಿಗಳ ಓದಿನ ಕಡೆ ಗಮನ ನೀಡಬೇಕು ಎಂದರು.
ಉಪನ್ಯಾಸಕರಾದ ಜೈಹನುಮಾನ ಎಚ್.ಕೆ, ಸಿಬ್ಬದಿಗಳಾದ ಎಸ್.ಎಸ್. ಅರಕೇರಿ, ಡಿ.ಎಲ್. ಬೀಳಗಿ ಸೇರಿದಂತೆ ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು. ಉಪನ್ಯಾಸಕ ಡಾ. ವಿಜಯ ಮುರದಂಡೆ ಸ್ವಾಗತಿಸಿದರು. ವಿದ್ಯಾರ್ಥಿ ಚೈತ್ರಾ ಗೌಡರ ಪ್ರಾರ್ಥಿಸಿ, ನಿರೂಪಿಸಿದರು. ದೈಹಿಕ ನಿರ್ದೇಶಕ ಡಾ. ಸಿ.ಬಿ.ರಣಗಟ್ಟಿಮಠ ವಂದಿಸಿದರು.