ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯ:ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ

ವಿಜಯಪುರ,ಜ.17:ಈಗಿನ ಸಮಯದಲ್ಲಿ ಖಾಸಗಿ ಶಾಲೆಗಳನ್ನು ನಡೆಸುವದು ತುಂಬಾ ಕಷ್ಟಕರವಾಗಿದೆ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಈ ನಾಗರಾಳೆ ಶಾಲೆಯು ಸತತ 23 ವರ್ಷಗಳ ಕಾಲದಿಂದಲೂ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವುದರಲ್ಲಿ ಮುಂಚೂಣಿಯಲ್ಲಿದ್ದು, ಶಾಲೆಯ ವಿದ್ಯಾರ್ಥಿಗಳ ಬಗ್ಗೆ ಪ್ರತಿ ತಿಂಗಳು ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತ, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಆವರು ಹೇಳಿದರು.

ವಿಜಯಪುರ ನಗರದ ಗಚ್ಚಿನಕಟ್ಟಿ ಕಾಲನಿಯಲ್ಲಿರುವ ನಾಗರಾಳೆ ಪಬ್ಲಿಕ್ ಶಾಲೆಯ 23ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಶಿಕ್ಷಕರು ಮಕ್ಕಳ ಬಗ್ಗೆ ವಿಶೇಷ ಕಾಳಜಿ ತೋರಿಸಿದ್ದರಿಂದ ಸತತ ಮೂರು ವರ್ಷಗಳಿಂದ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 100 ಫಲಿತಾಂಶವನ್ನು ನೀಡುವುದರ ಮೂಲಕ ಒಳ್ಳೆಯ ಗುಣಮಟ್ಟದ ಶಿಕ್ದಣ ಸಂಸ್ಥೆಯಾಗಿ ಹೊರ ಹೊಮ್ಮುತ್ತಿದ್ದು, ಅತ್ಯಂತ ಶ್ಲಾಘನೀಯ ಎಂದರು.

ಕರ್ನಾಟಕ ರಾಜ್ಯ ಕಾರ್ಮಿಕರ ಮತ್ತು ಬಡ ರೋಗಿಗಳ ಕಲ್ಯಾಣ ಪರಿಷತ್ (ಎನ್.ಜಿ.) ಅಧ್ಯಕ್ಷ ಅಶೋಕ ಜುಗತಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಈಗಿನ ಜಾಗತಿಕ ಕಾಲದಲ್ಲಿ ಕೇವಲ ಫೇಸಬುಕ್ , ವಾಟ್ಸಪ್, ಟಿ.ವಿ.ಗಳಲ್ಲಿ ಕಾಲ ಹರಣ ಮಾಡುತ್ತಿದ್ದು, ಇದನ್ನು ಬಿಟ್ಟು ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಗಮನಹರಿಸಬೇಕು. ಪೋಷಕರು ಸಹ ತಮ್ಮ ಮಕ್ಕಳ ಬಗ್ಗೆ ನಿಗಾ ವಹಿಸಬೇಕು. ಶಾಲೆಯಲ್ಲಿ ಕಲಿಸುವ ಪಾಠ ಬೋಧನೆಗಳನ್ನು ಗಮನ ಹರಿಸಿ ಶಿಕ್ಷಕರ ಗಮನಕ್ಕೆ ತಂದು ಮಕ್ಕಳ ಉತ್ತಮ ಭವಿಷ್ಯದ ಕಡೆಗೆ ಗಮನಹರಿಸಬೇಕೆಂದರು.

ಅಧ್ಯಕ್ಷತೆಯನ್ನು ಶಾಲೆಯ ಅಧ್ಯಕ್ಷ ಎಸ್.ಬಿ. ನಾಗರಾಳೆ ವಹಿಸಿದ್ದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ್ಷಿ ತನುಜಾ ನಾಗರಾಳೆ, ಶಿಕ್ಷಕಿಯರಾದ ನೇಹಾ ಚೌಗಲೆ, ಅಶ್ವಿನಿ ಪಟ್ಟಣಶೆಟ್ಟಿ, ಸೌಜನ್ಯ ನಾಲವಾರ, ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ಶಾಲೆಯ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.