ವಿದ್ಯಾರ್ಥಿನಿಯರಿಗೆ ಪುಸ್ತಕ ವಿತರಣೆ

ಗಂಗಾವತಿ ಡಿ.6: ಇಲ್ಲಿನ ಪರಿಶಿಷ್ಟ ವರ್ಗದ ಬಾಲಕಿಯರ ವಸತಿ ನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ವರ್ಷದ ಶೇ.24.10ರ ಯೋಜನೆಯಡಿ ವಿದ್ಯಾರ್ಥಿನಿಯರಿಗೆ ನಗರಸಭೆ ಅಧ್ಯಕ್ಷೆ ಮಾಲಾಶ್ರೀ ಸಂದೀಪ್ ಪುಸ್ತಕಗಳನ್ನು ವಿತರಿಸಿದರು.
ಉಪಾಧ್ಯಕ್ಷೆ ಸುಧಾ ಸೋಮನಾಥ್, ನಗರಸಭೆ ಸದಸ್ಯ ಶ್ಯಾಮೀದ್ ಮನಿಯಾರ್, ಪೌರಾಯುಕ್ತ ಅರವಿಂದ ಬಿ.ಜಮಖಂಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ನಗರಸಭೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.