ವಿದ್ಯಾರ್ಥಿನಿಲಯಕ್ಕೆ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನ್ ರಾಜ್ ಭೇಟಿ


ಹೊಸಪೇಟೆ ಆ.26: ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನ್ ರಾಜ್ ಅವರು ನಗರದ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿನಿಲಯದ ಆಹಾರ ದಾಸ್ತಾನು ಕೊಠಡಿಗೆ ತೆರಳಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಲಯದ ಅಧಿಕಾರಿಗಳಿಂದ ಊಟ ತಿಂಡಿ ಇತರೆ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ. ಸೇರಿದಂತೆ ಇತರರು ಹಾಜರಿದ್ದರು.