ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜಗಳೂರು ಜು,22: – ೨೦೨೨-೨೩ನೇ ಸಾಲಿಗೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿನಿಲಯಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾಲೂಕು ಹಂತದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾ ಯಕ ನಿರ್ದೇಶಕ ಮಹೇಶ್ವರಪ್ಪ ತಿಳಿಸಿದ್ದಾರೆ.ಕೌನ್ಸಿಲಿಂಗ್ ಮೂಲಕ ವಿದ್ಯಾ ರ್ಥಿಗಳನ್ನು ಆಯ್ಕೆ ಮಾಡಬೇಕಾಗಿದ್ದು ದಿನಾಂಕ; ೨೫-೦೭-೨೦೨೨ರ ಸೋಮವಾರ ಬೆಳಿಗ್ಗೆ ಡಾ. ಬಿ.ಆರ್.ಅಂಬೇಡ್ಕರ್ ಭವನ ಜಗಳೂರು ಟೌನ್ ಇಲ್ಲಿ ಕೌನ್ಸಿಲಿಂಗ್ ಕರೆಯಲಾಗಿರುತ್ತದೆ. ಆದ್ದರಿಂದ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳು ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ತಿಳಿಸಿದ್ದಾರೆ

Attachments area