ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ: ಎಬಿವಿಪಿ ಪ್ರತಿಭಟನೆ, ಡಿಸಿಗೆ ಮನವಿ ಸಲ್ಲಿಕೆ

ಸಂಜೆವಾಣಿ ವಾರ್ತೆ,
ವಿಜಯಪುರ,ಏ.21:ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಲವ್ ಜಿಹಾದಿಯ ಕಾರಣಕ್ಕಾಗಿ ಫಯಾಜ್ ಎಂಬಾತ ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ನಗರದ ಗಾಂಧಿವೃತ್ತದಿಂದ ಮೆರವಣಿಗೆ ಮೂಲಕ ಹೊರಟ ಕಾರ್ಯಕರ್ತರು ಬಸವೇಶ್ವರ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೆಲ ಹೊತ್ತು ಪ್ರತಿಭಟನೆ ನಡೆಸಿದರು.
ಅನಂತರ ಜಿಲ್ಲಾಧಿಕಾರಿ ಮೂಲಕ ಎಬಿವಿಪಿ ಕಾರ್ಯಕರ್ತರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಕಲಾ ಮಂಚ ಪ್ರಾಂತ ಸಹ ಪ್ರಮುಖರಾದ ಸುರೇಖಾ ಕುಲಕರ್ಣಿ ಮಾತನಾಡಿ, ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು. ಇಂತಹ ದೇಗುಲದಲ್ಲಿ ಹಾಡ ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳ ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ. ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಫಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಆಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆಮಾಡಲಾಗಿದೆ. ಇದು ಅತ್ಯಂತ ಹೇಯ ಕೃತ್ಯ ಎಂದು ತೀವ್ರವಾಗಿ ಖಂಡಿಸಿದರು/
ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕೃತ್ಯ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತದೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತಗೊಂಡಿದೆ. ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆÉ ಎಂದರು.
ಜಿಲ್ಲಾ ಸಂಚಾಲಕÀ ಮಂಜುನಾಥ ಹಳ್ಳಿ ಮಾತನಾಡಿ, ನೇಹಾ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ/
ಈ ಸಂಧರ್ಭದಲ್ಲಿ ಸಿದ್ದು ಪತ್ತಾರ, ಪ್ರವೀಣ ಬಿರಾದಾರ, ಮಹಾಂತೇಶ ಕಂಬಾರ, ಸಂದೀಪ ಅರಳಗುಂಡಿ, ಶ್ರವಣ ಕಾತ್ರಾಳ, ರೇಖಾ ಮಾಳಿ, ಸುಜಾತಾ ಕುಲಕರ್ಣಿ, ಪೂಜಾ ವೀರಶೆಟ್ಟಿ, ಜ್ಯೋತಿ ಸಜ್ಜನ, ಐಶ್ವರ್ಯ ಆಸಂಗಿ, ಪವಿತ್ರಾ, ಬಾಲಾಜಿ ಬಿರಾದಾರ, ಶಿವಾಜಿ, ದುಂಡಪ್ಪ, ರಮೇಶ, ಶ್ರೀಕಾಂತ, ಬಾಬುರಾವ, ಸಿದ್ದಾರ್ಥ, ಪ್ರವೀಣ, ಪವಿತ್ರಾ ಮುಂತಾದ ಪ್ರಮುಖರು ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.