ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಕಲಬುರಗಿ,ಜು.17-ಕಾಲೇಜು ವಿದ್ಯಾರ್ಥಿಯೊಬ್ಬಳನ್ನು ಪುಸಲಾಯಿಸಿ ಲಾಡ್ಜ್‍ಗೆ ಕರೆದುಕೊಂಡು ಹೋಗಿ ಅತ್ಯಾಚಾರ ವೆಸಗಿದ ಘಟನೆ ಫರಹತಾಬಾದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿ ವಿದ್ಯಾರ್ಥಿಯನ್ನು ಪುಸಲಾಯಿಸಿ ಕಾರಿನಲ್ಲಿ ಲಾಡ್ಜ್‍ಗೆ ಕರೆದುಕೊಂಡು ಹೋಗಿ ಅತ್ಯಾಚಾರ ವೆಸಗಿದ್ದು, ಈ ವಿಷಯ ಬಾಯಿ ಬಿಟ್ಟರೆ ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾಳೆ.
ಈ ಸಂಬಂಧ ನಾನಾಗೌಡ ಬರಮರೆಡ್ಡಿ ಎಂಬಾತನ ವಿರುದ್ಧ ಫರಹತಾಬಾದ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.