ವಿದ್ಯಾರ್ಥಿನಿ ಸಾವು ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ: 20 ವಾಹನಗಳಿಗೆ ಬೆಂಕಿ

ಚೆನ್ನೈ, ಜು. 17- ತಮಿಳುನಾಡಿನ ಕಲ್ಲಕುರುಚಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಪೋಷಕರು, ಸಂಬಂಧಿಕರು, ವಿದ್ಯಾರ್ಥಿಗಳು ಸೇರಿ ಸಾವಿರಾರು ಜನರು ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಶಾಲಾ ಬಸ್‍ಗಳಿಗೆ ಬೆಂಕಿ ಹಚ್ಚಿದ್ದಾರೆ.
ಕಾಲೇಜಿನ ವಸ್ತುಗಳೆಲ್ಲಾ ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ.
ಶಕ್ತಿ ಇಂಟನ್ರ್ಯಾಷನಲ್ ಶಾಲೆಯಲ್ಲಿ 17 ವರ್ಷದ ಶ್ರೀಮತಿ ಎಂಬ ವಿದ್ಯಾರ್ಥಿನಿ ಶಕ್ತಿ ಇಂಟನ್ರ್ಯಾಷನಲ್ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಶಾಲೆಯ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು.
ಕಳೆದ ಮೂರು ದಿನಗಳ ಹಿಂದೆ ಹಾಸ್ಟೆಲ್‍ನ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿತ್ತು.
ಆದರೆ ಘಟನಾ ಸ್ಥಳದಲ್ಲಿ ಯಾವುದೇ ರಕ್ತದ ಕಲೆಗಳು ಇರಲಿಲ್ಲ. ಬದಲಿಗೆ ಹಾಸ್ಟೆಲ್ ಶೌಚಾಲಯದ ಗೋಡೆ ಮೇಲೆ ರಕ್ತ ಸಿಕ್ತ ಕಲೆಗಳು ಪತ್ತೆಯಾಗಿದೆ. ನ್ಯಾಯಕ್ಕಾಗಿ ಪೋಷಕರು ಹೋರಾಟ ನಡೆಸುತ್ತಿದ್ದರು. ಇಂದು ಪ್ರತಿಭಟನೆ ಹಿಂಸಾಚರಕ್ಕೆ ತಿರುಗಿ, ಶಾಲೆಯ 20 ಬಸ್‍ಗಳಿಗೆ ಬೆಂಕಿ ಹಚ್ಚಿದ್ದಾರೆ. ಕಿಟಕಿ, ಸಿಕ್ಕ ಸಿಕ್ಕ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ.
ಕಲ್ಲಕುರಿಯ ಕಾಲೇಜು ಬಳಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಕಲ್ಲಕುರಿಯ ಕಾಲೇಜು ಬಳಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಪ್ರತಿಭಟನೆ ಹತ್ತಿಕ್ಕಲು ಯತ್ನಿಸಿದ ಪೊಲೀಸರ ಮೇಲು ಕಲ್ಲು ತೂರಾಟ ನಡೆಸಲಾಗಿದೆ. ಓರ್ವ ಹಿರಿಯ ಪೊಲೀಸ್ ಅಧಿಕಾರಿ ಸೇರಿ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ. ಪೊಲೀಸರ ವಾಹನಕ್ಕೂ ಬೆಂಕಿ ಹಚ್ಚಿದ್ದಾರೆ. ಹತ್ತಿಕ್ಕಲು ಯತ್ನಿಸಿದ ಪೊಲೀಸರ ಮೇಲು ಕಲ್ಲು ತೂರಾಟ ನಡೆಸಲಾಗಿದೆ. ಓರ್ವ ಹಿರಿಯ ಪೊಲೀಸ್ ಅಧಿಕಾರಿ ಸೇರಿ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ. ಪೊಲೀಸರ ವಾಹನಕ್ಕೂ ಬೆಂಕಿ ಹಚ್ಚಿದ್ದಾರೆ. ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.