ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ

ಗದಗ, ಜ3 : ಕಾನೂನು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹಳ ಮುಖ್ಯ, ವಕೀಲ ವೃತ್ತಿಯಲ್ಲಿ ಸಾಧನೆ ಮಾಡಲು ನಿರಂತರ ಅಭ್ಯಾಸ ಅವಶ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ನುಡಿದರು.
ಅವರು ಗದಗ ನಗರದ ಹುಲಕೋಟಿ ಸಹಕಾರ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಒಕ್ಕೂಟ ಹಾಗೂ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಛಾಟನೆ ನೆರವೇರಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಕೆ. ಗುರುಪ್ರಸಾದ ಅವರು ಮಾತನಾಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಚಟುವಟಿಕೆ, ಸೌಲಭ್ಯಗಳ ಕುರಿತು ವಿವರಿಸಿದರು.
ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹುಲಕೋಟಿ ಸಹಕಾರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ರವಿ ಮೂಲಿಮನಿ ಅವರು ಮಾತನಾಡಿ, ವಿದ್ಯಾರ್ಥಿಗಳು ಮಾನಸಿಕ ಹಾಗೂ ಧೈಹಿಕವಾಗಿ ಸದಾ ಸಧೃಡವಾಗಿರಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹುಲಕೋಟಿ ಸಹಕಾರ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದ ಅಧ್ಯಕ್ಷರಾದ ಎಸ್.ಕೆ. ಪಾಟೀಲ ಅವರು ಮಾತನಾಡಿ, ಯುವ ಜನತೆಗೆ ಕಾನೂನಿನ ಅರಿವು ಅವಶ್ಯವಾಗಿದೆ ಎಂದ ಅವರು ನೂತನ ವಿದ್ಯಾರ್ಥಿ ಒಕ್ಕೂಟದ ಸದಸ್ಯರನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಆರ್.ಎಸ್. ಪಾಟೀಲ, ಉಪನ್ಯಾಸಕರಾದ ಪ್ರೊ. ಎಸ್.ಐ. ಅಣ್ಣಿಗೇರಿ, ಡಿ.ಎಲ್. ಕುಲಕರ್ಣಿ, ಮಹಾಂತೇಶ ಕೊರಡಕೇರಿ, ವಿಶ್ವನಾಥ ಹಿರೇಮಠ, ಗುರುರಾಜ ಗೌರಿ, ಸಂತೋಷ ಬಿಂಗಿ, ಎಂ.ಎಫ್. ಹೊಂಬಳ, ಶ್ರೀಮತಿ ಸಂಗೀತಾ ಪಾಟೀಲ ಉಪಸ್ಥಿತರಿದ್ದರು. ಪ್ರಾ. ಪಲ್ಲವಿ ಬೂಯಾರ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮ ನಿರೂಪಣೆಯನ್ನು ಸುನೀಲ ಎಸ್ ಹಾಗೂ ನಾಜಿಯಾಖಾನ್ ಪಠಾಣ ನೆರವೇರಿಸಿದರು. ತೇಜಸ್ವಿನಿ ವಂದಿಸಿದರು.