ವಿದ್ಯಾರ್ಥಿ, ಪೋಲೀಸ್ ಅನುಭವಿಕ ಕಲಿಕಾ ಕಾರ್ಯಕ್ರಮ

ಸಂಜೆವಾಣಿ ವಾರ್ತೆ

ದಾವಣಗೆರೆ.ಫೆ.೨೨: ದಕ್ಷಿಣ ಭಾರತದಲ್ಲೇ ಪ್ರಥಮವಾಗಿ ಅದರಲ್ಲೂ ಕರ್ನಾಟಕದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪ್ರಥಮವಾಗಿ ನಡೆಸಲಾಗುತ್ತಿರುವ ತರಬೇತಿಯಿಂದಾಗಿ ಸಮಾಜ, ಸಮುದಾಯ ಪೊಲೀಸ್ ವ್ಯವಸ್ಥೆ ಮೂಲಕ ಸುಸ್ಥಿರ, ಅಪರಾಧರಹಿತ ಸಮಾಜ ನಿರ್ಮಾಣ ಮಾಡಬಹುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.ದಾವಣಗೆರೆ ಜಿಲ್ಲಾ ಪೆÇಲೀಸ್, ಎನ್‍ಎಸ್‍ಎಸ್ ವಿಭಾಗ, ದಾವಣಗೆರೆ ವಿಶ್ವ ವಿದ್ಯಾಲಯ ಸಹಯೋಗದಲ್ಲಿ ನಗರದ ಬಡಾವಣೆ ಪೋಲೀಸ್ ಠಾಣೆ ಆವರಣದಲ್ಲಿ  ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿ, ಪೋಲೀಸ್ ಅನುಭವಿಕ ಕಲಿಕಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದಾವಣಗೆರೆ ವಿಶ್ವವಿದ್ಯಾನಿಲಯದ ಎನ್‍ಎಸ್‍ಎಸ್ ವಿಭಾಗದ ಆಯ್ದ 50 ವಿದ್ಯಾರ್ಥಿಗಳಿಗೆ 30 ದಿನಗಳ ಕಾಲ ಮೊದಲ 15 ಪೆÇಲೀಸ್ ಇಲಾಖೆ ಕಾರ್ಯ, ಕಾನೂನು, ಅಪರಾಧ ಶಾಸ್ತ್ರ, ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ನಂತರ ಐದು ದಿನ ಪೆÇಲೀಸ್ ಇಲಾಖೆಯ ವಿವಿಧ ಘಟಕಗಳಿಗೆ ಕರೆದೊಯ್ದು ಕಾರ್ಯಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ. ಮುಂದಿನ ಐದು ದಿನ ಅಪರಾಧಿಕ ಪ್ರಕರಣಗಳ ವರದಿ ಸಿದ್ಧಪಡಿಸುವಿಕೆ, ಪೆÇಲೀಸ್ ಇಲಾಖೆಯಲ್ಲಿ ತಂತ್ರಜ್ಞಾನ ಬಳಕೆ, ಕೌಶಲ ತರಬೇತಿ ನೀಡಲಾಗುತ್ತದೆ ಎಂದರು.ಕೇಂದ್ರದ ಯುವಜನ ಸೇವೆ ಇಲಾಖೆಯಿಂದ ಪ್ರಾರಂಭಿಸಲಾಗಿರುವ ಕಾರ್ಯಕ್ರಮದ ಮೂಲಕ ಅಪರಾಧ ತಡೆ, ಸುಸ್ಥಿರ ಸಮಾಜ ನಿರ್ಮಾಣ, ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿಯ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದ್ದು, ಪ್ರಾಯೋಗಿಕವಾಗಿ ಐದು ಕಾಲೇಜುಗಳ ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಗೆ ಎಸ್‍ಒಪಿ ಪ್ರಕಾರ ತರಬೇತಿ, ಮಾಹಿತಿ ನೀಡಲಾಗುತ್ತದೆ. ತರಬೇತಿ ಪೂರೈಸಿ, ಪ್ರಮಾಣಪತ್ರ ಪಡೆದ ವಿದ್ಯಾರ್ಥಿಗಳಿಗೆ ಒಟ್ಟಾರೆ 24 ಅಂಕ ನೀಡಲಾಗುತ್ತದೆ. ಆ ಮೂಲಕ ವಿದ್ಯಾರ್ಥಿಗಳನ್ನು ಬ್ರಾಂಡ್ ಅಂಬಾಸಿಡರ್‍ರನ್ನಾಗಿ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.