ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಶೀರ್ಷಿಕೆ ಬಿಡುಗಡೆ

ಕಾಲೇಜಿನ ಸುತ್ತ ನಡೆಯುವ ಕಥೆಯಾಧಾರಿತ  `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಶಿರ್ಷಿಕೆ ಗಮನ ಸೆಳೆದಿದೆ. ಶೀರ್ಷಿಕೆಯನ್ನು ವಿದ್ಯಾರ್ಥಿಗಳೇ ಬಿಡುಗಡೆ ಮಾಡಿರುವುದು ವಿಶೇಷ.

ನಟ ಚಂದನ್ ಶೆಟ್ಟಿ ನಾಯಕನಾಗಿ ಕಾಣಿಸಿಕೊಂಡಿರುವ ಚಿತ್ರ ಶೀರ್ಷಿಕೆ ಮೂಲಕವೇ ಕುತೂಹಲ ಕೆರಳಿಸಿದೆ. ಈ ಹಿಂದೆ ಶ್ರೀಮುರುಳಿ ನಾಯಕನಾಗಿದ್ದ `ಲೂಸ್‍ಗಳು’ ಚಿತ್ರ ನಿರ್ದೇಶಿಸಿದ್ದ ಅರುಣ್ ಅಮುಕ್ತ ಇದೀಗ ವಿಭಿನ್ ಕಥೆಯೊಂದಿಗೆ ಚಿತ್ರವನ್ನು ತೆರೆಗೆ ಕಟ್ಟಿಕೊಡಲು ಮುಂದಾಗಿದ್ದಾರೆ. ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರವನ್ನು ಭಿನ್ನವಾಗಿ ಕಟ್ಟಿಕೊಡಲು ಚಿತ್ರತಂಡ ತಯಾರಾಗಿದೆ.

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭಣವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ.

ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.