`ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರೀಕರಣ ಪೂರ್ಣ

`ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಅರುಣ್ ಅಮುಕ್ತ ಆಕ್ಷನ್ ಕಟ್ ಹೇಳಿರುವ ಚಿತ್ರದಲ್ಲಿ ಚಂದನ್ ಶೆಟ್ಟಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

ನಿರ್ದೇಶಕ ಅರುಣ್ ಅಮುಕ್ತ ಮಾತನಾಡಿ ಮಹತ್ವಾಕಾಂಕ್ಷೆಯ ಚಿತ್ರ. ತಾರಾಬಳಗ, ತಾಂತ್ರಿಕತೆ ಸೇರಿದಂತೆ  ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿದೆ ಎಂದರು

ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಕಶ್ಯಪ್ ಮಾತನಾಡಿ ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.ಪೆÇಸ್ಟ್ ಪ್ರೊಡಕ್ಷನ್ ಕೆಲಸ ಬರದಿಂದ ಸಾಗಿದೆ.ಜೂನ್‍ನಲ್ಲಿ ಚಿತ್ರ ಬಿಡುಗಡೆ ಮಾಡುವ ಪ್ರಯತ್ನ ನಡೆದಿದೆ ಎಂದರು

ನಾಯಕ ಚಂದನ್ ಶೆಟ್ಟಿ ಮಾತನಾಡಿ ಚಿತ್ರದಲ್ಲಿ ಭಿನ್ನ ಶೇಡುಗಳನ್ನು ಹೊಂದಿರುವ  ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳಳುಗಟ್ಟಲೆ ಶ್ರಮವಹಿಸಿ ತಯಾರಿ ಮಾಡಲಾಗಿದೆ.ಈ ಪಾತ್ರ ನಿಬಾಯಿಸುವುದು ಸವಾಲಾಗಿತ್ತು  ಎಲ್ಲರ ಶ್ರಮದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ ಬೆಂಬಲ ಸಹಕಾರವಿರಲಿ ಎಂದು ಕೇಳಿಕೊಂಡರು

ಕಲಾವಿದರಾದ ಪ್ರಶಾಂತ್ ಸಂಬರ್ಗಿ, ಹಿರಿಯ ನಟಿ ಭವ್ಯಾ, ಸುನೀಲ್ ಪುರಾಣಿಕ್, ರಘು ರಾಮನಕೊಪ್ಪ  ಸೇರಿದಂತೆ ಹಲವು ಮಂದಿ ನಟಿಸಿದ್ದು ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತವಿದೆ