ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು,ಜು.೨೧- ವಿದ್ಯಾರ್ಥಿ ವೇತನ ಹಾಗೂ ಸರ್ಕಾರಿ ಪಿಯು ಕಾಲೇಜಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ ಮುಖಂಡರು ಜಿಲ್ಲಾಧಿಕಾರಿಗಳ ಮುಂದೆ ಪ್ರತಿಭಟನೆ ನಡೆಸಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,
ನಗರದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜುಗಳು ಬೆರಳೆಣಿಕೆಯಷ್ಟಿವೆ ಅದರಲ್ಲಿ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಸಾವಿರದ ನಾಲ್ಕುನೂರು ವಿದ್ಯಾರ್ಥಿಗಳು ಓದುತ್ತಿದ್ದು ಅಂತಹ ಕಾಲೇಜಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಹಾಗೂ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಕಟ್ಟಡಗಳು ಹಳೆಯದಾಗಿದ್ದು ಮಳೆ ಬಂದರೆ ನೀರು ಸೋರುವ ಪರಿಸ್ಥಿತಿಯಲ್ಲಿದೆ.ಈ ಶೈಕ್ಷಣಿಕ ವರ್ಷದಲ್ಲಿ ಹುಬ್ಬಳ್ಳಿ ಮತ್ತು ಚಿಕ್ಕಬಳ್ಳಾಪುರ ನಲ್ಲಿ ಕೊಠಡಿಯ ಮೇಲ್ಟಾವಣಿ ಬಿದ್ದು ಮೃತಪಟ್ಟಿದ್ದಾರೆ.ಇಂತಹ ಕಹಿ ಘಟನೆ ಇಲ್ಲಿಯೂ ಜರಗದಂತೆ ಕ್ರಮ ಕೈಗೊಳ್ಳಬೇಕು ಮತ್ತು ಬೆಲೆ ಏರಿಕೆ ಮತ್ತು ಅನಾವೃಷ್ಟಿದಿಂದ ರೈತ- ಕಾರ್ಮಿಕರು,ಬಡಜನರು ತತ್ತರಿಸಿ ಹೋಗಿದ್ದಾರೆ.ವಿದ್ಯಾರ್ಥಿವೇತನ ತೆಗೆದುಕೊಳ್ಳುವ ಬಹು ಸಂಖ್ಯಾತ ವಿದ್ಯಾರ್ಥಿಗಳು ರೈತ ಕಾರ್ಮಿಕ ಬಡಜನರ ಮಕ್ಕಳೇ ಆಗಿರುವುದರಿಂದ ಆರ್ಥಿಕವಾಗಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ಇಂತಹ ಸಮಯದಲ್ಲಿ ಸರ್ಕಾರವು ವಿದ್ಯಾರ್ಥಿ ವೇತನವನ್ನು ನೀಡದೇ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಯ್ಯಾಳಪ್ಪ, ಪೀರ್ ಸಾಬ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.