
ಸಂಜೆ ವಾಣಿ ವಾರ್ತೆ
ಕೊಟ್ಟೂರು, ಮೇ.25: ಪಟ್ಟಣದ ಇಂದು ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವಾಗೀಶಯ್ಯ ಪಿ.ಎಂ. ಇವರನ್ನು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಇವರು ಮೇ ೨೩, ೨೦೨೩ ರಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದ್ದು, ಎರಡು ವರ್ಷದವರೆಗೆ ವಿದ್ಯಾ ವಿಷಯಕ ಪರಿಷತ್ ಸದಸ್ಯರಾಗಿ ಮುಂದುವರೆಯಲಿದ್ದಾರೆ.
ವಿದ್ಯಾ ವಿಷಯಕ ಪರಿಷತ್ ಸದಸ್ಯರಾಗಿ ನೇಮಕವಾಗಿದ್ದಕ್ಕೆ ಕಾಲೇಜಿನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ಸಮಸ್ತ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದರು