ವಿದ್ಯುತ್ ಕಂಬಕ್ಕೆ ಕ್ರೂಸರ್ ಡಿಕ್ಕಿಮೂವರು ಯುವಕರ ಸಾವು

ಬೀದರ್,ಮೇ. 2-ವೇಗವಾಗಿ ಬಂದ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮೃತರು ಸೇರಿ ಐವರು ಕ್ರೂಸರ್ ನಲ್ಲಿ ಇಂದು ಬೆಳಿಗ್ಗೆ ಜಿಲ್ಲೆಯ ಚಟ್ನಳ್ಳಿ ಕಡೆಗೆ ಬರುವಾಗ ನಿಯಂತ್ರಣ ತಪ್ಪಿ ವಿದ್ಯುತ್ ಕಂಬವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೂವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಚಟ್ನಳ್ಳಿ ಬಳಿ ಸಂಭವಿಸಿದೆ.
ಚಟ್ನಳ್ಳಿಯ ಪ್ರದೀಪ್(25), ವಿನೋದ್(26), ವರ್ದೀಶ್(25) ಮೃತಪಟ್ಟವರು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಬೀದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಸೇರಿ ಐವರು ಕ್ರೂಸರ್ ನಲ್ಲಿ ಇಂದು ಬೆಳಿಗ್ಗೆ ಜಿಲ್ಲೆಯ ಚಟ್ನಳ್ಳಿ ಕಡೆಗೆ ಬರುವಾಗ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಜಿಲ್ಲಾ ಪೆÇಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.