ವಿದ್ಯುತ್ ತಗುಲಿ ಯುವಕ ಸಾವು

ಕಲಬುರಗಿ,ಜೂ.9-ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಇಲ್ಲಿನ ಅಕ್ಕಮಹಾದೇವಿ ಕಾಲೋನಿಯಲ್ಲಿ ನಡೆದಿದೆ.
ಅಂಬಿಕಾ ನಗರದ ದೀಪಕ್ ತಂದೆ ಸಹದೇವ ಜಾಧವ್ (35) ಮೃತಪಟ್ಟ ಯುವಕ.
ಅಕ್ಕಮಹಾದೇವಿ ಕಾಲೋನಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಈ ಸಂಬಂಧ ಮೃತನ ತಾಯಿ ಮಂಜುಳಾಬಾಯಿ ಜಾಧವ್ ಅವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಭಿಕ್ಷುಕ ಸಾವು
ನಗರದ ಕೇಂದ್ರ ಬಸ್ ನಿಲ್ದಾಣದ ಶೌಚಾಲಯದ ಹತ್ತಿರ ಅನಾರೋಗ್ಯದಿಂದ ನರಳುತ್ತಿದ್ದ 40 ರಿಂದ 45 ವರ್ಷ ವಯಸ್ಸಿನ ಭಿಕ್ಷುಕನನ್ನು 108 ಅಂಬ್ಯುಲೆನ್ಸ್‍ನಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ 5.2 ಅಡಿ ಎತ್ತರ, ಸಾದಾ ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಮೃತನ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಶೋಕನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.