ಅಫಜಲಪುರ,ಜೂ.30-ವಿದ್ಯುತ್ ತಂತಿ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ಅಫಜಲಪುರ ತಾಲ್ಲೂಕಿನ ಬಟಗೇರಿ ಗ್ರಾಮದಲ್ಲಿ ನಡೆದಿದೆ.
ಸಂತೋಷ ಗುಜ್ಜಾ (28) ಮೃತಪಟ್ಟವರು. ಇವರು ಬಟಗೇರಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಟಿಸಿ ಕಂಬ ಏರಿ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಂತೋಷ ಗುಜ್ಜಾ ಅವರು ಜೇವರ್ಗಿ ತಾಲ್ಲೂಕಿನ ಹುಲ್ಲೂರ ಗ್ರಾಮದವರಾಗಿದ್ದು ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಗುವಿದೆ. ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.