
ಬೀದರ್:ಆ.8: ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಕೈಬಿಟ್ಟಿರುವುದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಸಮೀಪದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ???ಯಾಲಿ ನಡೆಸಿದರು.
ಅನಂತರ ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರ ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ 20ಕ್ಕೂ ಹೆಚ್ಚು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಕೈಬಿಟ್ಟಿದೆ. ಇದು ಸರಿಯಾದ ಕ್ರಮವಲ್ಲ. 20ರಲ್ಲಿ ಹೆಚ್ಚಿನವರು ರೈತರಿಗೆ ಸಂಬಂಧಿಸಿವೆ. ಇದು ರೈತವಿರೋಧಿ ಸರ್ಕಾರ ಎನ್ನುವುದು ಸಾಬೀತಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರವು ಎಪಿಎಂಸಿ ಕಾಯ್ದೆ ರದ್ದುಮಾಡಿ ರೈತರ ಆದಾಯಕ್ಕೆ ಕುತ್ತು ತಂದಿದೆ. ಅವೈಜ್ಞಾನಿಕವಾಗಿ ವಿದ್ಯುತ್ ದರ ಏರಿಕೆ ಮಾಡಿರುವುದರಿಂದ ರೈತರಿಗೆ ಸಮಸ್ಯೆಯಾಗಿದೆ. ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳವರಿಗೆ ಭಾರಿ ಹೊರೆ ಬಿದ್ದಿದೆ. 11 ಲಕ್ಷ ರೈತ ಕುಟುಂಬದ ವಿದ್ಯಾರ್ಥಿಗಳಿಗೆ ?438.69 ಕೋಟಿ ಹಣ ರೈತ ವಿದ್ಯಾನಿಧಿ ಯೋಜನೆ ಮೂಲಕ ಕೊಡಲಾಗುತ್ತಿತ್ತು. ಅದನ್ನು ರದ್ದುಪಡಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಜಿಲ್ಲೆಗೊಂದು ಗೋಶಾಲೆ ಯೋಜನೆ ಬಿಜೆಪಿ ಆರಂಭಿಸಿತ್ತು. ಆದರೆ, ಅಕ್ರಮವಾಗಿ ಗೋವುಗಳನ್ನು ಸಾಗಾಣಿಕೆ ಮಾಡುವವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಯೋಜನೆ ರದ್ದುಪಡಿಸಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ ರಾಜ್ಯದ 50 ಲಕ್ಷ ರೈತರಿಗೆ ಭೂ ಸಿರಿ ಯೋಜನೆಯಡಿ ?10 ಸಾವಿರ ಹೆಚ್ಚುವರಿ ಸಹಾಯ ಧನದ ಯೋಜನೆ ರದ್ದುಪಡಿಸಿ ರೈತರಿಗೆ ಅನ್ಯಾಯ ಮಾಡಲಾಗಿದೆ. ಕೃಷಿ ಸಮ್ಮಾನ್ ಯೋಜನೆ ತಡೆಹಿಡಿಯಲಾಗುತ್ತಿದೆ. ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದುಪಡಿಸಲಾಗಿದೆ. ನೀರಾವರಿ ಯೋಜನೆಗಳನ್ನು ನಿರ್ಲಕ್ಷಿಸಿ, ಗ್ಯಾರಂಟಿ ಯೋಜನೆಗಳಿಗೆ ಹಣ ಬಳಸಲಾಗುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಂಜುಕುಮಾರ ಪಾಟೀಲ ಜ್ಯಾಂತಿ, ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಮುಖಂಡರಾದ ಈಶ್ವರ್ ಸಿಂಗ್ ಠಾಕೂರ್, ಗುರುನಾಥ ಜ್ಯಾಂತಿಕರ್, ಸಂಗಮೇಶ ನಾಸಿಗಾರ್ ಮೊದಲಾದವರು ಪಾಲ್ಗೊಂಡಿದ್ದರು