
ಗದಗ.ಮಾ.10: ಪ್ರಜಾಪ್ರಭುತ್ವ ಬಲಿಷ್ಟಗೊಳಿಸುವಲ್ಲಿ ಮತದಾನವು ಪ್ರಮುಖ ಪಾತ್ರ ವಹಿಸಲಿದ್ದು ಪ್ರತಿಯೊಬ್ಬ ಅರ್ಹ ಮತದಾರರು ತಪ್ಪದೇ ತಮ್ಮ ಮತ ಚಲಾಯಿಸಬೇಕು ಎಂದು ಡಯಟ್ ಉಪನ್ಯಾಸಕರಾದ ಜಿ.ಡಿ. ದಾಸರ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿಯಿಂದ ತಹಶೀಲ್ದಾರ ಕಚೇರಿಯ ಹತ್ತಿರವಿರುವ ಲಯನ್ಸ್ ಕ್ಲಬ್‍ದಲ್ಲಿ ವಿ.ವಿ.ಪ್ರಾತ್ಯಕ್ಷಿಕೆಯನ್ನು ಬೀದಿ ಬದಿ ವ್ಯಾಪಾರಸ್ಥರಿಗೆ ಪ್ರಸ್ತುತಪಡಿಸಿ ಮಾತನಾಡಿದರು. ನಂತರ ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ವಿದ್ಯುನ್ಮಾನ ಮತಯಂತ್ರದ ಬಳಕೆ ಕುರಿತು ಪ್ರಾತ್ಯಕ್ಷಿಕೆಯನ್ನು ಸಾರ್ವಜನಿಕರಿಗೆ ಪ್ರಸ್ತುತಪಡಿಸಿ ಮಾತನಾಡಿದರು. ಅರ್ಹ ಮತದಾರರು ಚಲಾಯಿಸುವ ಮತವು ಚಲಾಯಿಸಿದ ಪಕ್ಷ ಅಥವಾ ವ್ಯಕ್ತಿಗೆ ದಾಖಲಾದ ಬಗ್ಗೆ ಖಾತರಿಪಡಿಸಿಕೊಳ್ಳಲು ವಿ.ವಿ.ಪ್ಯಾಟ ಯಂತ್ರ ಸಹಾಯವಾಗಲಿದೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಮೂಲಕ ಮತ ಚಲಾಯಿಸಲು ಅನುಕೂಲವಾಗುತ್ತಿದೆ ಎಂದರು. ವಿದ್ಯುನ್ಮಾನ ಮತಯಂತ್ರದ ಬಳಕೆಯ ಪ್ರತಿ ಹಂತಗಳನ್ನು ವಿವರಿಸಿ ಪ್ರಾತ್ಯಕ್ಷಿಕೆಯನ್ನು ಸಾದರಪಡಿಸಿದರು. ನಂತರ ನಗರದ ಸಿ.ಡಿ.ಓ ಜೈನ್ ಶಾಲೆಯಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರುಗಳಿಗೆ ವಿ.ವಿ.ಪ್ರಾತ್ಯಕ್ಷಿಕೆ ನೀಡಲಾಯಿತು.