ವಿದ್ಯುನ್ಮಾನ, ಸಾಮಾಜಿಕ ಜಾಲತಾಣ, ಇ-ಪತ್ರಿಕೆಗಳಲ್ಲಿ ಪ್ರಸಾರವಾಗುವ ಜಾಹೀರಾತುಗಳಿಗೆ ಪೂರ್ವಾನುಮತಿ ಕಡ್ಡಾಯ

ಚಿತ್ರದುರ್ಗ.ಏ.೧೩: ವಿದ್ಯುನ್ಮಾನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ಜಾಹೀರಾತುಗಳಿಗೆ ಜಿಲ್ಲಾ ಎಂ.ಸಿ.ಎಂ.ಸಿಯಿಂದ  ಪ್ರಮಾಣೀಕರಣ ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಹಾಗೂ ಇ-ಪತ್ರಿಕೆಗಳಲ್ಲಿ ಪ್ರಸಾರವಾಗುವ ಜಾಹೀರಾತುಗಳಿಗೂ ಪೂರ್ವಾನುಮತಿ ಅಗತ್ಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಮಾಧ್ಯಮ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಿದ್ಯುನ್ಮಾನ ಮತ್ತು ಸಾಮಾಜಿಕ ಜಾಲತಾಣದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ವಿಷಯ ಬಿತ್ತರಗೊಳಿಸಲು ಪೂರ್ವಾನುಮತಿ  ಕಡ್ಡಾಯ ಮಾಡಲಾಗಿದೆ. ಇದು ಕೇವಲ ಚುನಾವಣಾ ಸಂದರ್ಭ ಸೇರಿದಂತೆ ಎಲ್ಲ ಸಂದರ್ಭದಲ್ಲಿಯೂ ಅನ್ವಯವಾಗಲಿದೆ.  ಪತ್ರಿಕೆಗಳಲ್ಲಿ ಪ್ರಕಟವಾಗುವ ಜಾಹೀರಾತುಗಳಿಗೆ ಪೂರ್ವಾನುಮತಿ ಅಗತ್ಯವಿಲ್ಲ. ಆದರೆ ಮತದಾನ ಕೊನೆಗೊಳ್ಳುವ 48 ಗಂಟೆ ಮುಂಚಿತವಾಗಿ ಮುದ್ರಣ ಮಾಧ್ಯಮಗಳಲ್ಲಿ ಪ್ರಕಟಗೊಳಿಸಿರುವ ಜಾಹೀರಾತುಗಳಿಗೆ ಪ್ರಮಾಣೀಕರಣ ಪಡೆಯುವುದು ಅಗತ್ಯವಾಗಿದೆ.  ಪ್ರಮಾಣೀಕರಣ ಪಡೆಯಲು ಎರಡು ದಿನ ಮೊದಲು ಅರ್ಜಿ ಸಲ್ಲಿಸಬೇಕು ಎಂದರು