ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ ಜಯಭೇರಿ

ಬೆಂಗಳೂರು ನ.10 ವಿಧಾನಸಭೆ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿ ವಿಧಾನಪರಿಷತ್ತಿನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲು ಜಯಭೇರಿ ಬಾರಿಸಿದ್ದು ವಿಧಾನಪರಿಷತ್ತಿನ ಮೂರು ಕ್ಷೇತ್ರಗಳು ಬಿಜೆಪಿ ಪಾಲಾಗಿದೆ .
ಬೆಂಗಳೂರು ಶಿಕ್ಷಕರ ಕ್ಷೇತ್ರ ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ ಆಗ್ನೇಯ ಪದವೀಧರ ಕ್ಷೇತ್ರದ ಮತ ಎಣಿಕೆ ನಡೆದಿದ್ದು ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಜಯಗಳಿಸಿದ್ದಾರೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯ ಶಶೀಲ್ ನಮೋಶಿ ಮತ್ತು ಪಶ್ಚಿಮ ಪದವೀಧರ ಕ್ಷೇತ್ರದಿಂದ ಬಿಜೆಪಿಯ ಎಸ್ ವಿ ಸಂಕನೂರ ಜಯಗಳಿಸಿದ್ದಾರೆ