ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು

ವಿಜಯಪುರ, ನ.11-ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಅನುಮತಿ ಇಲ್ಲದೆ ಕೇಂದ್ರಸ್ಥಾನವನ್ನು ಬಿಟ್ಟು ಹೋಗಬಾರದು ಎಂದು ಜಿಲ್ಲಾಧಿಕಾರಿಗಳಾದ ಪಿ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.

ಕರ್ನಾಟಕ ವಿಧಾನಪರಿಷತ್ ಬಿಜಾಪೂರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಚುನಾವಣೆ-2021ರ ಕುರಿತು ಚುನಾವಣಾ ನಡೆಸಲು ದಿನಾಂಕ ನಿಗಧಿಪಡಿಸಿ ಅಧಿಸೂಚನೆ ಹೊರಡಿಸಿದ್ದು ಮಾನ್ಯ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ದಿನದಿಂದ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಎಲ್ಲ ಅಧಿಕಾರಿಗಳು (ಜಿಲ್ಲಾ ಮಟ್ಟದ /ತಾಲ್ಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಇತರೆ ಕಂದಾಯ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು) ತಮ್ಮ ಕಾರ್ಯವ್ಯಾಪ್ತಿಯಲ್ಲಿದ್ದು, ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು ಯಾವುದೇ ರಜೆಯನ್ನು ಪಡೆಯುವಂತಿಲ್ಲ

ಆಯೋಗದ ಅನುಮತಿ ಇಲ್ಲದೇ ಕೇಂದ್ರಸ್ಥಾನವನ್ನು ಬಿಡುವಂತಿಲ್ಲ ಎಂದು ಚುನಾವಣಾ ಆಯೋಗ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಜರುಗಿದ ವಿಡಿಯೋ ಸಂವಾದದಲ್ಲಿ ಹಾಗೂ ಸಭೆ ನಡುವಳಿಯಲ್ಲಿ ನಿರ್ದೇಶಿಸಿರುತ್ತಾರೆ ಈ ಸಂದರ್ಭದಲ್ಲಿ ಸರಕಾರಿ ಅಧಿಕಾರಿ/ ಸಿಬ್ಬಂದಿಯವರ ಪಾತ್ರ ಬಹುಮುಖ್ಯವಾದದ್ದು, ಈ ಕಾರ್ಯಕ್ಕೆ ಅಧಿಕಾರಿ/ಸಿಬ್ಬಂದಿಯವರ ಸೇವೆಯು ಅತೀ ಅವಶ್ಯಕತೆ ಇರುತ್ತದೆ

ಚುನಾವಣೆ ಕಾರ್ಯವನ್ನು ಎಲ್ಲ ಇಲಾಖೆ ಅಧಿಕಾರಿ/ಸಿಬ್ಬಂದಿಯವರು ಜಂಟಿಯಾಗಿ ತಂಡದ ರೂಪದಲ್ಲಿ ಕಾರ್ಯ ಮಾಡಬೇಕಾಗುತ್ತದೆ. ಜಿಲ್ಲೆಯ ಎಲ್ಲ ಅಧಿಕಾರಿಗಳು ಜಿಲ್ಲೆಯ ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ/ತಾಲ್ಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಇತರೆ ಕಂದಾಯ ಅಧಿಕಾರಿಗಳು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು) ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸಲು ಸೂಚಿಸಿದೆ ಹಾಗೂ ಕರ್ತವ್ಯದ ದಿನಗಳಲ್ಲಿ ಮತ್ತು ಸಾರ್ವಜನಿಕ ರಜಾ ದಿನಗಳಲ್ಲಿ ಜಿಲ್ಲಾ ಹಾಗೂ ತಾಲ್ಲೂಕಾ ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡಕೂಡದು ಎಂದು ಈ ಮೂಲಕ ಸೂಚಿಸಿದೆ,ಯಾವುದೇ ತುರ್ತು ಕಾರ್ಯ ಬಂದಲ್ಲಿ ಈ ಕುರಿತು ಜಿಲ್ಲಾಧಿಕಾರಿಗಳ ಅನುಮತಿ ಪಡೆದುಕೊಂಡು ಕೇಂದ್ರಸ್ಥಾನ ಬಿಡಲು ಸೂಚಿಸಿದೆ ಇದಕ್ಕೆ ತಪ್ಪಿದಲ್ಲಿ ಅಂತಹ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.