ವಿಧಾನಸಭಾ ಕ್ಷೇತ್ರ ಚುನಾವಣಾ ವೀಕ್ಷಕರ ಭೇಟಿ

ಆಳಂದ:ಎ.25: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ನಿಯುಕ್ತಿಯಾದ ಸಾಮಾನ್ಯ ವೀಕ್ಷಕರಾಗಿ ಇಲ್ಲಿಗೆ ಭೇಟಿ ನೀಡಿದ ಐಎಎಸ್ ಅಧಿಕಾರಿ ಮಿತಿಲೇಶ ಮಿಶ್ರಾ ಅವರು ಪರಿಶೀಲನೆ ನಡೆಸಿದರು.

ಸ್ಥಳೀಯ ವಿಧಾನಸಭಾ ಚುನಾವಣೆಯ ತರಬೇತಿ ಹಾಗೂ ಮತದಾನ ಸಿದ್ಧತೆ ಹಾಗೂ ನೀತಿ ಸಂಹಿತೆ ಪಾಲನೆಯ ಕುರಿತು ಮಾಹಿತಿ ಕಲೆಹಾಕಿದರು.

ಮತದಾನ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಮಹಾಂತೇಶ ಮುಳಗೊಂಡ ಅವರು ತಿಳಿಸಿದರು.

ಚುನಾವಣೆ ಮತದಾನ ಹಾಗೂ ನೀತಿ ಸಂಹಿತೆ ಕುರಿತು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ ಮಿತಿಲೇಶ ಅವರು, ಮತಗಟ್ಟೆಗಳಲ್ಲಿನ ಚುನಾವಣೆ ಕಾರ್ಯವನ್ನು ಜವಾಬ್ದಾರಿಯಿಂದ ಮುಂಜಾಗೃತ ಕ್ರಮವಾಗಿ ಸುವ್ಯವಸ್ಥೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಮತದಾನ ಕೇಂದ್ರದಲ್ಲಿ ಭದ್ರತೆಯ ದೃಷ್ಟಿಯಿಂದ ಸಿ.ಸಿ.ಟಿ.ವಿ ವ್ಯವಸ್ಥೆ, ಬ್ಯಾರಿಕೇಡಿಂಗ್ ವ್ಯವಸ್ಥೆ ಮತ್ತು ಪೆÇಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನೇಮಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.