ವಿಧಾನಸಭಾ ಚುನಾವಣೆಮತಟ್ಟೆಗಳಲ್ಲಿ ಕಾರ್ಯನಿರತ ಸಿಬ್ಬಂದಿಗಳಿಗೆ ಊಟ-ಉಪಹಾರ ಸೂಕ್ತ ವ್ಯವಸ್ಥೆಗೆ ಸೂಚನೆ

ವಿಜಯಪುರ, ಏ.16: ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮತದಾನದ ಪೂರ್ವದಿನ ಹಾಗೂ ಮತದಾನ ದಿನ ಊಟ ಹಾಗೂ ಉಪಹಾರ ಪೂರೈಸಲು ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ 2072 ಮತಗಟ್ಟೆಗಳಲ್ಲಿ ನಿಯೋಜಿತ ಸಿಬ್ಬಂದಿಗಳಿಗೆ ನಿಗದಿತ ಸಮಯದಲ್ಲಿ ಊಟ-ಉಪಹಾರ, ಶುದ್ಧ ಕುಡಿಯುವ ನೀರು ಒದಗಿಸಬೇಕು. ಮತಗಟ್ಟೆಗಳಲ್ಲಿ ಹಾಗೂ ಮತಗಟ್ಟೆಗೆ ನಿಯೋಜಿತ ಸಿಬ್ಬಂದಿಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ನಗರ ಹಾಗೂ ಗ್ರಾಮೀಣ ಪ್ರಧಾನಮಂತ್ರಿ ಪೋಷಣಾ ಯೋಜನೆ ಸಹಾಯಕ ನಿರ್ದೇಶಕ ಎಸ್.ಎಸ್.ಕುಂಬಾರ, ಬಸವನಬಾಗೇವಾಡಿಯ ಸಹಾಯಕ ನಿರ್ದೇಶಕ ಕೆ.ಆರ್.ಲಮಾಣಿ, ಮುದ್ದೇಬಿಹಾಳ ಸಹಾಯಕ ನಿರ್ದೇಶಕ ಎಸ್.ಬಿ.ಹೋಲ್ಕುರ್, ಸಿಂದಗಿ ಸಹಾಯಕ ನಿರ್ದೇಶಕ ಎಸ್.ಎಸ್.ಕತ್ನಳ್ಳಿ, ಇಂಡಿ ಸಹಾಯಕ ನಿರ್ದೇಶಕ ಎಂ.ಎಚ್.ಯರಗುದ್ರಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಸ್.ಎಸ್.ಮುಜಾವರ ಉಪಸ್ಥಿತರಿದ್ದರು.