ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸಿಲ್ಲ: ಎಚ್ ಡಿಕೆ

ಮಂಡ್ಯ,ಜು.26-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ
ಮಾತನಾಡಿದ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರೆ ಎಂಬುದಾಗಿ ಯಾರು ಹೇಳಿದರು ಎಂದು ಪ್ರಶ್ನಿಸಿದರು.
ಅವರು ಆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಲು ನಿಖಿಲ್ ಹೋರಾಟ ಮಾಡುತ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ- ಕಾಂಗ್ರೆಸ್ ನಿಂದ ಜೆಡಿಎಸ್‌ ಪಕ್ಷವನ್ನು ನಿರ್ನಾಮ ಮಾಡಲು ಆಗಲ್ಲ. ಈ ಬಾರಿ ಕಾಂಗ್ರೆಸ್, ಬಿಜೆಪಿಗಿಂತ ನಮ್ಮ ಪಕ್ಷ 15-20 ಹೆಚ್ಚಿನ ಸ್ಥಾನ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕೆ‌.ಆರ್.ಎಸ್. ಭಾಗದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಬೇಕಾ? ಬೇಡವೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಟ್ರಯಲ್ ಬ್ಲಾಸ್ಟ್ ನಡೆಸುವುದನ್ನು ಸರ್ಕಾರ ನಿಲ್ಲಿಸಿದೆ. ಅಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ಆ ಭಾಗದಲ್ಲಿ ರೈತರು ಆತಂಕದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಪರಿಸ್ಥಿತಿ, ವಾಸ್ತವಾಂಶ ತಿಳಿದುಕೊಂಡು ಸರ್ಕಾರ ಟ್ರಯಲ್ ಬ್ಲಾಸ್ಟ್ ಬಗ್ಗೆ ತೀರ್ಮಾನ ಮಾಡಬೇಕು ಎಂದು ಹೇಳಿದರು.