ವಿಧಾನಸಭಾ ಚುನಾವಣೆ: ಮತದಾನಕ್ಕೆ ಸಕಲ ಸಿದ್ದತೆ-ಜಿಲ್ಲಾಧಿಕಾರಿ ಡಿ.ಎಸ್.ರಮೇಶ್

ಚಾಮರಾಜನಗರ, ಮೇ.08:- ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮೇ 10ರಂದು ನಡೆಯಲಿರುವ ಮತದಾನಕ್ಕೆ ಜಿಲ್ಲೆಯಲ್ಲಿ ಸಕಲ ಸಿದ್ದತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಸಿದ್ದತೆಗಳ ಕುರಿತು ವಿವರಿಸಿದ ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 982 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹನೂರು ವಿಧಾನಸಭಾಕ್ಷೇತ್ರದಲ್ಲಿ 253, ಕೊಳ್ಳೇಗಾಲ ವಿಧಾನಸಭಾಕ್ಷೇತ್ರದಲ್ಲಿ 241, ಚಾಮರಾಜನಗರ ವಿಧಾನಸಭಾಕ್ಷೇತ್ರದಲ್ಲಿ 239 ಹಾಗೂ ಗುಂಡ್ಲುಪೇಟೆ ವಿಧಾನಸಭಾಕ್ಷೇತ್ರದಲ್ಲಿ 249 ಮತಗಟ್ಟೆಗಳು ಇವೆ. ಒಟ್ಟಾರೆ ಮತಗಟ್ಟೆಗಳ ಪೈಕಿ 138 ಮತಗಟ್ಟೆಗಳು ನಗರ ಪ್ರದೇಶದಲ್ಲಿ ಹಾಗೂ 844 ಮತಗಟ್ಟೆಗಳು ಗ್ರಾಮೀಣ ಪ್ರದೇಶದಲ್ಲಿವೆಎಂದರು.
ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಮತಗಟ್ಟೆಗಳನ್ನು ಪಿಂಕ್ ಪೋಲಿಂಗ್ ಸ್ಟೇಷನ್ ಎಂದು ಗುರುತಿಸಲಾಗಿದ್ದು, ಜಿಲ್ಲೆಯಲ್ಲಿಒಟ್ಟಾರೆ 12 ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳಿಗೆ ಮಹಿಳಾ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹನೂರು ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಕೊಂಗರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಮಗೆರೆಯ ಏಡೆಡ್ ಹಿರಿಯ ಪ್ರಾಥಮಿಕ ಶಾಲೆ, ಹಿರಿಯಂಬಲದ ಸರ್ಕಾರಿ ಬುಡಕಟ್ಟುಆಶ್ರಮ ಶಾಲೆ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ನಡುಕಲಮೋಳೆಯಲ್ಲಿರುವ ಸರ್ಕಾರಿಕಿರಿಯ ಪ್ರಾಥಮಿಕ ಶಾಲೆ, ಕೊಳ್ಳೇಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಿಳಿಗಿರಿರಂಗನಬೆಟ್ಟದ ಯರಕನಗದ್ದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಾಮರಾಜನಗರ ವಿಧಾನಸಭಾಕ್ಷೇತ್ರದಲ್ಲಿ ನಗರದ ಉಪ್ಪಾರ ಬೀದಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ಎರಡು ಮತಗಟ್ಟೆಗಳು), ಪರಿವಾರ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಂಡ್ಲುಪೇಟೆ ವಿಧಾನಸಭಾಕ್ಷೇತ್ರದಲ್ಲಿ ತೆರಕಣಾಂಬಿಯ ಸರ್ಕಾರಿ ಪಿಯುಕಾಲೇಜು, ಚಿಕ್ಕತುಪ್ಪೂರಿನ ಸರ್ಕಾರಿ ಸಂಯುಕ್ತ ಪ್ರೌಢಶಾಲೆ, ಬನ್ನಿತಾಳಪುರ ಗ್ರಾಮ ಪಂಚಾಯಿತಿಕಚೇರಿಯಲ್ಲಿ ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಸಾಂಪ್ರದಾಯಿಕ (ಎಥ್ನಿಕ್) ಮತಗಟ್ಟೆಯನ್ನು ನಗರದ ಪಿಡಬ್ಲ್ಯೂಡಿ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾಗಿದೆ. ಹನೂರು ವಿಧಾನಸಭಾಕ್ಷೇತ್ರದ ಕುರಟ್ಟಿ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳ್ಳೇಗಾಲ ವಿಧಾನಸಭಾಕ್ಷೇತ್ರದ ಮುಳ್ಳೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಅಗರಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಾಮರಾಜನಗರ ವಿಧಾನಸಭಾಕ್ಷೇತ್ರದ ಕೊತ್ತಲವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಂಡ್ಲುಪೇಟೆ ವಿಧಾನಸಭಾಕ್ಷೇತ್ರದ ಕೊಡಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾದರಿ ಮತಗಟ್ಟೆಗಳನ್ನು ತೆರೆಯಲಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 426547 ಪುರುಷರು, 434873 ಮಹಿಳೆಯರು, 69 ಇತರರು ಸೇರಿದಂತೆಒಟ್ಟು 861489 ಮತದಾರರಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ 111960 ಪುರುಷರು, 109581 ಮಹಿಳೆಯರು, 16 ಇತರರು ಸೇರಿದಂತೆ ಒಟ್ಟು 221557 ಮತದಾರರಿದ್ದಾರೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 106979 ಪುರುಷರು, 109604 ಮಹಿಳೆಯರು, 19 ಇತರರು ಸೇರಿದಂತೆ ಒಟ್ಟು 216602 ಮತದಾರರಿದ್ದಾರೆ. ಚಾಮರಾಜನಗರ ವಿಧಾನಸಭಾಕ್ಷೇತ್ರದಲ್ಲಿ 102588 ಪುರುಷರು, 106891 ಮಹಿಳೆಯರು, 15 ಇತರರು ಸೇರಿದಂತೆ ಒಟ್ಟು 209494 ಮತದಾರರಿದ್ದಾರೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 105020 ಪುರುಷರು, 108797 ಮಹಿಳೆಯರು, 19 ಇತರರು ಸೇರಿದಂತೆಒಟ್ಟು 213836 ಮತದಾರರಿದ್ದಾರೆ ಎಂದರು.
ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗುತ್ತಿದ್ದು 982 ಮತಗಟ್ಟೆಗಳಿಗೆ 1483 ಬ್ಯಾಲೆಟ್‍ಯೂನಿಟ್ (ಬಿಯು), 1177 ಕಂಟ್ರೋಲ್‍ಯೂನಿಟ್ (ಸಿಯು), 1274 ವಿವಿ ಪ್ಯಾಟ್ ಹಂಚಿಕೆ ಮಾಡಲಾಗಿದೆ.ಒಟ್ಟು 982 ಮತಗಟ್ಟೆಗಳಿಗೆ 1190 ಪಿ.ಆರ್.ಒ, 1189 ಎ.ಪಿ.ಆರ್.ಒ, 2384 ಪಿ.ಒ ಸೇರಿದಂತೆಒಟ್ಟು 4763 ಅಧಿಕಾರಿ ಸಿಬ್ಬಂದಿ ನಿಯೋಜಿಸಲಾಗಿದೆ. 65 ಮೈಕ್ರೋ ಅಬ್ಸರ್‍ವರ್‍ಗಳನ್ನು ನೇಮಕ ಮಾಡಲಾಗಿದೆ. ಒಟ್ಟು 613 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಹನೂರು ವಿಧಾನಸಭಾಕ್ಷೇತ್ರದ ಹನೂರು ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಯಲ್ಲಿ, ಕೊಳ್ಳೇಗಾಲ ವಿಧಾನಸಭಾಕ್ಷೇತ್ರದ ಕೊಳ್ಳೇಗಾಲ ಪಟ್ಟಣದ ಶ್ರೀ ಮಹದೇಶ್ವರ ಪ್ರಥಮ ದರ್ಜೆಕಾಲೇಜು, ಚಾಮರಾಜನಗರ ವಿಧಾನಸಭಾಕ್ಷೇತ್ರದ ಚಾಮರಾಜನಗರ ಪಟ್ಟಣದ ಕರಿನಂಜನಪುರ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದ ಹತ್ತಿರದ ಸರ್ಕಾರಿ ಪ್ರಥಮದರ್ಜೆಕಾಲೇಜು, ಗುಂಡ್ಲುಪೇಟೆ ವಿಧಾನಸಭಾಕ್ಷೇತ್ರದ ಗುಂಡ್ಲುಪೇಟೆ ಪಟ್ಟಣದ ಸೆಂಟ್‍ಜಾನ್‍ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಸ್ಟರಿಂಗ್ ಮತ್ತುಡಿಮಸ್ಟರಿಂಗ್‍ನಡೆಯಲಿದೆ. ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಚಾಮರಾಜನಗರದ ಬೇಡರಪುರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 13ರಂದು ನಡೆಯಲಿದೆ.
ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾಕ್ಷೇತ್ರದ ಸಾಮಾನ್ಯ ಚುನಾವಣಾ ವೀಕ್ಷಕರಾದಅಭಿನವ್ ಚಂದ್ರಅವರು ಮಾತನಾಡಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಿದ್ದೇವೆ. ಮತದಾನ ಮುಕ್ತಾಯದ 72 ಗಂಟೆಗಳ ಪೂರ್ವ ಅವಧಿಯಲ್ಲಿಅತ್ಯಂತ ಕಟ್ಟೆಚ್ಚೆರದಿಂದ ಎಲ್ಲವನ್ನೂ ಗಮನಿಸಲಾಗುತ್ತದೆ. ಯಾವುದೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದರೂ ದಿನದ 24 ಗಂಟೆ ಅವಧಿಯಲ್ಲಿಯೂ ತಿಳಿಸಬಹುದು. ಕಂಟ್ರೋಲ್‍ರೂಂ ಮೂಲಕವು ಯಾವುದೇ ಅಕ್ರಮಗಳ ಬಗ್ಗೆ ಮಾಹಿತಿ ನೀಡಬಹುದುಎಂದರು.
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಈಗಾಗಲೇ ವರದಿಯಾಗಿವೆ. ಚುನಾವಣೆ ಪ್ರಚಾರದ ವೇಳೆ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆಯೂ ದೂರುಗಳು ದಾಖಲಾಗಿವೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ, ಅಕ್ರಮಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿಕ್ರಮ ವಹಿಸಲಾಗುತ್ತದೆ. ಮುಕ್ತ ಪಾರದರ್ಶ ಕಚುನಾವಣೆಗೆ ಜನರು ಸಹಕಾರ ನೀಡಬೇಕು ಎಂದು ಚುನಾವಣಾ ವೀಕ್ಷಕರಾದ ಅಭಿನವ್‍ಚಂದ್ರ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರುಚುನಾವಣಾ ಸಂಬಂಧಿಕೈಗೊಂಡಿರುವ ಪೊಲೀಸ್ ಬಂದೋ ಬಸ್ತ್ ಭದ್ರತೆಕುರಿತು ವಿವರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಚುನಾವಾಣ ತಹಶೀಲ್ದಾರ್ ರವಿಶಂಕರ್ ವಸ್ತ್ರದ್ ಸುದ್ದಿಗೋಷ್ಠಿಯಲ್ಲಿ ಇದ್ದರು.