
ಚಾಮರಾಜನಗರ, ಮಾ.31:- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬ್ಯಾನರ್, ಫ್ಲೆಕ್ಸ್, ಕರ ಪತ್ರ ಇತರೆ ಮಾದರಿಯ ಮುದ್ರಣ ಮಾಡುವಾಗ ಮುದ್ರಿತ ಪ್ರಚಾರ ಸಾಮಾಗ್ರಿಯಲ್ಲಿ ಮುದ್ರಕರ ಹೆಸರು, ವಿಳಾಸ, ಪ್ರಕಾಶಕರ ವಿವರವನ್ನು ಸ್ಪಷ್ಟವಾಗಿ ಮುದ್ರಿಸಬೇಕು. ಇಲ್ಲವಾದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1951 ಸೆಕ್ಷನ್ 127ಎ ಅನ್ವಯ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್‍ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾದರಿ ನೀತಿ ಸಹಿಂತೆ ಪಾಲನೆ, ಅಂಚೆ ಮತದಾನ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಮುದ್ರಣ ಸಂಸ್ಥೆಯ ಮಾಲೀಕರು, ಪ್ರತಿನಿಧಿಗಳ ಸಭೆಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಧಾನಸಭಾಚುನಾವಣೆ ಸಂಬಂಧ ಪ್ರಕಟಿಸುವ ಬ್ಯಾನರ್, ಫ್ಲೆಕ್ಸ್, ಕರಪತ್ರದಲ್ಲಿ ಕಡ್ಡಾಯವಾಗಿ ಮುದ್ರಕರ ಹೆಸರು ವಿಳಾಸ, ಮೊಬೈಲ್ ನಂಬರ್, ಪ್ರಕಾಶಕರ ಹೆಸರು, ವಿವರಗಳನ್ನು ಮುದ್ರಣ ಮಾಡಬೇಕಾಗುತ್ತದೆ. ಅಲ್ಲದೇ ಎಷ್ಟು ಪ್ರತಿಗಳನ್ನು ಮುದ್ರಿಸಲಾಗಿದೆ ಎಂಬ ವಿವರವನ್ನು ನಮೂದು ಮಾಡಬೇಕಾಗುತ್ತದೆ. ಈ ಕುರಿತ ಮಾಹಿತಿ ಪ್ರಕಟಿಸದಿದ್ದಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ 1951 ಸೆಕ್ಷನ್ 127ಎ ಅನ್ವಯ ಕಾನೂನಿನ ಅಡಿಯಲ್ಲಿ ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಮಾದರಿ ನೀತಿ ಸಂಹಿತೆಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಅನುಮತಿಇಲ್ಲದೇಯಾವುದೇ ಬ್ಯಾನರ್, ಪೋಸ್ಟರ್, ಫ್ಲೆಕ್ಸ್ ಅಳವಡಿಸುವಂತಿಲ್ಲ. ಕರ್ನಾಟಕ ಮುಕ್ತ ಸ್ಥಳಗಳ ತಡೆಕಾಯ್ದೆ 1980ರ ಅನುಸಾರಅನಗತ್ಯ ಬ್ಯಾನರ್ ಅಳವಡಿಸುವವರ ವಿರುದ್ದಕ್ರಮ ತೆಗೆದುಕೊಳ್ಳಲಾಗುತ್ತದೆ. ಏಕಗವಾಕ್ಷಿ (ಸಿಂಗಲ್ ವಿಂಡೋ) ವ್ಯವಸ್ಥೆಯಡಿಎಲ್ಲಾರಾಜಕೀಯ ಪಕ್ಷಗಳಿಗೆ ಅಭ್ಯರ್ಥಿಗಳಿಗೆ ವಾಹನ ಒಡಾಟದ ಪರವಾನಗಿ ಹಾಗೂ ಸಭೆ ಸಮಾರಂಭ ನಡೆಸಲುಅನುಮತಿ ನೀಡುವ ಸಲುವಾಗಿ ಸುವಿಧಾಆಪ್ ಅಡಿ ವ್ಯವಸ್ಥೆಕಲ್ಪಿಸಲಾಗುತ್ತದೆ ಎಂದರು.
ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅಂಗವಿಕಲರಿಗೆ ಅಂಚೆ ಮತದಾನ ಮಾಡಲು ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ. ಪ್ರತಿಯೊಂದು ಮತಗಟ್ಟೆವಾರು ಹಿರಿಯ ನಾಗರಿಕರು ಮತ್ತು ಅಂಗವಿಕಲ ಮತದಾರರನ್ನುಗುರುತಿಸಲಾಗಿದೆ. ಈ ಮತದಾರರಿಗೆ ಮತದಾನ ಮಾಡಲು ವ್ಯವಸ್ಥೆ ಮಾಡಲಿದ್ದು, ರಾಜಕೀಯ ಪಕ್ಷಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಮತದಾನದ ಸಂದರ್ಭದಲ್ಲಿ ಅಭ್ಯರ್ಥಿಗಳ ಏಜೆಂಟ್‍ಗಳು ಹಾಜರಿರುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಹೊಸದಾಗಿ ಸೇರ್ಪಡೆಗೊಂಡಿರುವ ಮತದಾರರಿಗೆ ಗುರುತಿನ ಚೀಟಿಯನ್ನು (ಓಟರ್ ಐಡಿ) ಅವರು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ನೇರವಾಗಿರವಾನಿಸುವ ವ್ಯವಸ್ಥೆ ಮಾಡಲಾಗಿದೆ. ವಿಧಾನಸಭಾ ಸಾರ್ವತ್ರಿಕಚುನಾವಣೆ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿಎಲ್ಲರ ಸಹಕಾರಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್‍ಅವರು ತಿಳಿಸಿದರು.
ಹೆಚ್ಚುವರಿಜಿಲ್ಲಾಧಿಕಾರಿಎಸ್. ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸರಸ್ವತಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎ.ಎಚ್. ನಸ್ರುಲ್ಲಾಖಾನ್, ಎಸ್. ಬಾಲಸುಬ್ರಹ್ಮಣ್ಯಂ, ನಾಗಯ್ಯ, ಬ್ಯಾಡಮೂಡ್ಲು ಬಸವಣ್ಣ, ಪ್ರಿಂಟಿಂಗ್ ಪ್ರೆಸ್ ಮಾಲೀಕರು, ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.