ವಿಧಾನಸಭಾ ಚುನಾವಣೆ;12 ನಾಮಪತ್ರ ಸಲ್ಲಿಕೆ


ಹೊಸಪೇಟೆ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಪೈಕಿ 4 ವಿಧಾನಸಭಾ ಕ್ಷೇತ್ರಗಳಿಂದ ಸೋಮವಾರ ಒಟ್ಟು 12 ಜನ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ವೆಂಕಟೇಶ್ ಟಿ. ತಿಳಿಸಿದ್ದಾರೆ.
89-ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ:
ಹಗರಿಬೊಮ್ಮನಹಳ್ಳಿ(ಪರಿಶಿಷ್ಟ ಜಾತಿ) ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನೇಮಿರಾಜ ನಾಯ್ಕ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಡಾ.ವಿ.ಹೆಚ್.ಹನುಮಂತಪ್ಪ ಅವರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
90-ವಿಜಯನಗರ ವಿಧಾನಸಭಾ ಕ್ಷೇತ್ರ:
ವಿಜಯನಗರ(ಸಾಮಾನ್ಯ) ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಚ್.ಆರ್.ಗವಿಯಪ್ಪ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಕಲ್ಲೇಶಿ ಕೆ.ಎಸ್. ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಉಮೇಶ್ ಕೆ. ಅವರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
96-ಕೂಡ್ಲಿಗಿ ವಿಧಾನಸಭಾ ಕ್ಷೇತ್ರ:
ಕೂಡ್ಲಿಗಿ(ಪರಿಶಿಷ್ಟ ಪಂಗಡ) ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಎನ್.ಟಿ.ಶ್ರೀನಿವಾಸ್, ಸ್ವತಂತ್ರ ಅಭ್ಯರ್ಥಿಗಳಾಗಿ ರಾಘವೇಂದ್ರ ಗುರಿಕಾರ್, ಕೆ. ನಕುಲಪ್ಪ ಅವರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
104-ಹರಪನಹಳ್ಳಿ ವಿಧಾನಸಭಾ ಕ್ಷೇತ್ರ:
ಹರಪನಹಳ್ಳಿ(ಸಾಮಾನ್ಯ) ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಎನ್.ಎಂ.ನೂರ್ ಅಹ್ಮದ್,  ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ರವಿ ಲಂಬಾಣಿ, ಸ್ವತಂತ್ರ ಅಭ್ಯರ್ಥಿಗಳಾಗಿ ವೀಣಾ ಮಹಾಂತೇಶ್ ಸಿ, ಸುಮಂತ್ ಕುಮಾರ್ ಆರ್.ಎಸ್ ಅವರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.