ವಿಧಾನಸಭಾ ಚುನಾವಣೆ:90 ಅಭ್ಯರ್ಥಿಗಳಿಂದ 98 ನಾಮಪತ್ರ ಸಲ್ಲಿಕೆ

ಕಲಬುರಗಿ,ಏ.20:ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ 90 ಅಭ್ಯರ್ಥಿಗಳಿಂದ 98 ನಾಮಪತ್ರಗಳು ಸಲ್ಲಿಕೆಯಾಗಿವೆ. ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ತಿಳಿಸಿದ್ದಾರೆ.

34-ಅಫಜಲಪುರ ವಿಧಾನಸಭಾ ಕ್ಷೇತ್ರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಲಕಾಜಪ್ಪ ಅವರು 1 ನಾಮಪತ್ರ, ಜನತಾದಳ (ಸೆಕ್ಯೂಲರ್) ಪಕ್ಷದ ಅಭ್ಯರ್ಥಿಯಾಗಿ ಶಿವಕುಮಾರ ಅವರು 2 ನಾಮಪತ್ರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಕಲ್ಲಪ್ಪ ಗುರಪ್ಪ ಅವರು 1 ನಾಮಪತ್ರ, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಹುಚ್ಚಪ್ಪ ಅವರು 1 ನಾಮಪತ್ರ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಪಕ್ಷದ ಅಭ್ಯರ್ಥಿಯಾಗಿ ಶಾಮರಾವ ಬಕ್ಸರ್ ಅವರು 1 ನಾಮಪತ್ರ, ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಆರ್.ಡಿ. ಪಾಟೀಲ ಅವರು 1 ನಾಮಪತ್ರ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಾಲೀಕಯ್ಯ ಅವರು 1 ನಾಮಪತ್ರ, ಮಹಾಂತೇಶ ಪಾಟೀಲ ಅವರು ಸಮಾವಾದಿ ಪಕ್ಷ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ತಲಾ 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಅವರು 1 ನಾಮಪತ್ರ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಶಿವರಾಜ ಗುರುಶಾಂತಪ್ಪ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಚಂದ್ರಕಾಂತ ಅವರು 1 ನಾಮಪತ್ರ ಹಾಗೂ ರಾಷ್ಟ್ರೀಯ ಸಮಾಜ ಪಕ್ಷದ ಅಭ್ಯರ್ಥಿಯಾಗಿ ರಮೇಶ ಎಂ. ಜಮಾದಾರ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.

35-ಜೇವರ್ಗಿ ವಿಧಾನಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಹಣಮಂತ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಚಾಂದಸಾಬ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಮಹ್ಮದ್ ಯೂನೂಸ್ ವಂಟಿ ಅವರು 1 ನಾಮಪತ್ರ, ಪಕ್ಷೇತರ ಅಭ್ಯಥಿಯಾಗಿ ಮಹಿಬೂಬ್ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ರಿಯಾಜ್ ಅಹ್ಮದ್ ಅವರು 1 ನಾಮಪತ್ರ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಜಯ ಸಿಂಗ್ ಅವರು 3 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಮೊಹ್ಮದ್ ಮುಬೀನ್ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ವಿಜಯಕುಮಾರ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಸಿದ್ದಲಿಂಗಪ್ಪ ಅವರು 1 ನಾಮಪತ್ರ, ಇಂಡಿಯನ್ ಮೂವಮೆಂಟ್ ಪಾರ್ಟಿಯ ಅಭ್ಯರ್ಥಿಯಾಗಿ ಚಂದ್ರಕಾಂತ 1 ನಾಮಪತ್ರ, ರಾಷ್ಟ್ರ ನಿರ್ಮಾಣ ಪಾರ್ಟಿಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ನಬಿಸಾಬ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ತಿಪ್ಪಣ್ಣಾ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ 1 ನಾಮಪತ್ರ, ಆಮ ಅದ್ಮಿ ಪಕ್ಷದ ಅಭ್ಯರ್ಥಿಯಾಗಿ ಬಂದೇನವಾಜ್ ಅವರು 1 ನಾಮಪತ್ರ ಹಾಗೂ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ದೊಡ್ಡಪ್ಪಗೌಡ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.

40-ಚಿತ್ತಾಪುರ ವಿಧಾನಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ರಾಜು ಹದನೂರು, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಶರಣಬಸಪ್ಪ ಪೀರಪ್ಪ, ಪಕ್ಷೇತರ ಅಭ್ಯರ್ಥಿಯಾಗಿ ಜೇಮಸಿಂಗ್ ಪಾಂಡುರಂಗ, ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಸುಭಾಶ್ಚಂದ್ರ ರಾಠೋಡ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜಗದೀಶ ಸಾಗರ ಹಾಗೂ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಭಾರತಿ ಮಣಿಕಂಠ ರಾಠೋಡ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.

41-ಸೇಡಂ ವಿಧಾನಸಭಾ ಕ್ಷೇತ್ರ: ಜನ ಸ್ಪಂದನಾ ಪಕ್ಷದ ಅಭ್ಯರ್ಥಿಯಾಗಿ ಶ್ರೀನಿವಾಸ ಅವರು 2 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಮೌನೇಶ ಅವರು 1 ನಾಮಪತ್ರ, ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿ ಶಂಕರ ಬಂಧಿ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಅಶೋಕ ಕುಮಾರ ಶೀಲವಂತ ಅವರು 1 ನಾಮಪತ್ರ, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಕಾಶೀಂ ಸಾಬ್ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ದೇವೀಂದ್ರ ಹಡಪಡ ಅವರು 1 ನಾಮಪತ್ರ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ರಾಜಕುಮಾರ ವೀರಶೆಟ್ಟಪ್ಪ ಅವರು 2 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಭರತ ಕುಮಾರ ಜಿ. ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಸುರೇಶ ಅವರು 1 ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಪಲ್ಲವಿ ಗುತ್ತೇದಾರ್ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.
42-ಚಿಂಚೋಳಿ ವಿಧಾನಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಸಂತೋಷ ಕಾನು, ಪಕ್ಷೇತರ ಅಭ್ಯರ್ಥಿಯಾಗಿ ಸುಭಾಷಚಂದ್ರ ಶಾಂತಪ್ಪ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರಮೇಶ ಜಯರಾಮ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಅವಿನಾಶ ಉಮೇಶ ಜಾಧವ, ಪಕ್ಷೇತರ ಅಭ್ಯರ್ಥಿಯಾಗಿ ಶಾಮರಾವ ಗಂಗಾರಾಮ, ಪಕ್ಷೇತರ ಅಭ್ಯರ್ಥಿಯಾಗಿ ಅವಿನಾಶ ಧಾವಜಿ, ಆಮ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಗೌತಮ್ ಮಾಣಿಕ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.
43-ಗುಲಬರ್ಗಾ (ಗ್ರಾಮೀಣ) ವಿಧಾನಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಸತೀಶ ಬಿ. ಸಿಂಧೆ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರೇವು ನಾಯಕ ಬೆಳಮಗಿ, ಪಕ್ಷೇತರ ಅಭ್ಯರ್ಥಿಯಾಗಿ ದತ್ತಾತ್ರೇಯ ಕೆ. ಕಮಲಾಪೂರಕರ, ಪಕ್ಷೇತರ ಅಭ್ಯರ್ಥಿಯಾಗಿ ವಿಠ್ಠಲ ಡಾಕು ಜಾಧವ, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಮೈಲಾರಿ ಯಶ್ವಂತ ಶೆಳ್ಳಿಗಿ, ರಾಷ್ಟ್ರೀಯ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಹಣಮಂತ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಭಗವಾನ ಏಡುರಾಮು ಭೋವಿ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.
44-ಗುಲಬರ್ಗಾ (ದಕ್ಷಿಣ) ವಿಧಾನಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಮಹ್ಮದ್ ಹುಸೇನ್ ಅವರು 1 ನಾಮಪತ್ರ, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಲಕ್ಷ್ಮಣರಾವ ರಾಮಣ್ಣ ಭೋಸಲೆ ಅವರು 1 ನಾಮಪತ್ರ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಲ್ಲಂಪ್ರಭು ಪಾಟೀಲ ಅವರು 2 ನಾಮಪತ್ರ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಾಲೆ) ಪಕ್ಷದ ಅಭ್ಯರ್ಥಿಯಾಗಿ ರಾಜಕುಮಾರ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಶರಣಬಸಪ್ಪ ಪಪ್ಪಾ ಅವರು 1 ನಾಮಪತ್ರ, ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಸಿ. ಕೃಷ್ಣ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಸುಧೇಂದ್ರ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ರಿಹ್ವಾನ್-ಉರ್-ರಹೆಮಾನ್ ಸಿದ್ದಿಕ್ಕಿ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಮಹ್ಮದ್ ಮಕಬೂಲ್ ಖಾನ್ ಅವರು 1 ನಾಮಪತ್ರ,, ಕರ್ನಾಟಕ ಜನಸೇವಾ ಪಾರ್ಟಿಯ ಅಭ್ಯರ್ಥಿಯಾಗಿ ಮಹಾರುದ್ರ ಅವರು 1 ನಾಮಪತ್ರ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಭಾರತ ಪಕ್ಷದ ಅಭ್ಯರ್ಥಿಯಾಗಿ ದಶರಥ ಕಲಗುರ್ತಿ ಅವರು 1 ನಾಮಪತ್ರ, ಹಿಂದೂಸ್ತಾನ ಜನತಾ ಪಾರ್ಟಿ ಸೆಕ್ಯೂಲರ್ ಪಕ್ಷದ ಅಭ್ಯರ್ಥಿಯಾಗಿ ದಿನಕರರಾವ್ ಕುಲಕರ್ಣಿ ಅವರು 1 ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ನಾಗಯ್ಯ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.
45-ಗುಲಬರ್ಗಾ (ಉತ್ತರ) ವಿಧಾನಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಅಬ್ದುಲ್ ಹಮೀದ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಅಬ್ದುಲ್ ರಹೀಮ ಅವರು 1 ನಾಮಪತ್ರ, ಅಖಿಲ ಭಾರತೀಯ ಮುಸ್ಲಿಂ ಲೀಗ್ (ಸೆಕ್ಯೂಲರ್) ಪಕ್ಷದ ಅಭ್ಯರ್ಥಿಯಾಗಿ ಅಬ್ದುಲ ಹಮೀದ ಹಾಜಿ ಮಹ್ಮದ್ ಅವರು 1 ನಾಮಪತ್ರ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಚಂದ್ರಕಾಂತ ಬಿ. ಪಾಟೀಲ (ಚಂದು ಪಾಟೀಲ) ಅವರು 2 ನಾಮಪತ್ರ, ಭಾರತೀಯ ಬಹುಜನ ಕ್ರಾಂತಿ ದಳ ಪಕ್ಷದ ಅಭ್ಯರ್ಥಿಯಾಗಿ ಪ್ರಕಾಶ ರಾಠೋಡ ಅವರು 1 ನಾಮಪತ್ರ, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಎಮ್.ಡಿ. ಮಹಮೂದ್ ಶಹಾ ಅವರು 1 ನಾಮಪತ್ರ, ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ನಾಸೀರ ಹುಸೇನ ಅವರು 1 ನಾಮಪತ್ರ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ನೂರ ಜಹಾಂ ಬೇಗಂ ಅವರು 1 ನಾಮಪತ್ರ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸೈಯದ್ ಸಜ್ಜಾದ ಅಲಿ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಖನೀಜ ಫಾತೀಮಾ ಅನ್ವರ ಹುಸೇನ್ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಮುಜಾಹೀದ್ ರೌಫ್ ಮಜಹರಿ ಅವರು 1 ನಾಮಪತ್ರ, ಭಾರತೀಯ ಜನ ಸಾಮ್ರಾಟ್ ಪಕ್ಷದ ಅಭ್ಯರ್ಥಿಯಾಗಿ ತಾರಾಬಾಯಿ ಭೋವಿ ಅವರು 1 ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಮಂಜೂರ ಪಟೇಲ್ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.
46-ಆಳಂದ ವಿಧಾನಸಭಾ ಕ್ಷೇತ್ರ: ರಾಷ್ಟ್ರೀಯ ಸಮಾಜ ಪಕ್ಷದ ಅಭ್ಯರ್ಥಿಯಾಗಿ ದತ್ತಪ್ಪ, ಭಾರತೀಯ ಬಹುಜನ ಕ್ರಾಂತಿ ದಳ ಪಕ್ಷದ ಅಭ್ಯರ್ಥಿಯಾಗಿ ಚವ್ಹಾಣ ರಾಜು, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ರಾಜಕುಮಾರ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಭೋಜರಾಜ, ಸ್ವತಂತ್ರ ಅಭ್ಯರ್ಥಿಯಾಗಿ ರಮೇಶ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಶಿವಕುಮಾರ ಖೇಡ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.