ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಸಾರ್ವಜನಿಕರು ಸಹಾಯವಾಣಿಗೆ ಸಂಪರ್ಕಿಸಿ ದೂರು ಸಲ್ಲಿಸಲು ಅವಕಾಶ

ಕಲಬುರಗಿ,ಮಾ.31:ಚುನಾವಣಾ ಆಯೋಗವು ಈಗಾಗಲೇ ಮಾರ್ಚ್ 29 ರಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಿದ್ದು, ಈ ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಹಾಗೂ ಚುನಾವಣಾ ನೀತಿ ಸಂಹಿತಾ ನಿಯಮಗಳನ್ನು ಉಲ್ಲಂಘನೆಯಾಗದಂತೆ ಅಗತ್ಯ ಕ್ರಮಗಳನ್ನು ಜರುಗಿಸುವ ನಿಟ್ಟಿನಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ದೂರುಗಳು, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕುರಿತು ಸಾರ್ವಜನಿಕರು ಕೆಳಕಂಡ ವಿವಿಧ ಮೂಲಗಳ ಮೂಲಕ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಯಶವಂತ ವಿ. ಗುರುಕರ್ ಅವರು ತಿಳಿಸಿದ್ದಾರೆ.

 24x7 ಜಿಲ್ಲಾ ಮತದಾರರ ಸಹಾಯವಾಣಿ ಟೋಲ್ ಫ್ರೀ ದೂರವಾಣಿ ಸಂಖ್ಯೆ 1950 ಹಾಗೂ 24x7 ಟೋಲ್ ಫ್ರೀ ದೂರವಾಣಿ ಸಂಖ್ಯೆ 08472-230141, ಸಿ-ವಿಜಿಲ್ ಅಪ್ಲಿಕೇಶನ್ಸ್ (e-ಗಿIಉIಐ) ಮೊಬೈಲ್ ಆ್ಯಪ್ ಮೂಲಕ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ deo.gulbarga@gmail.com ಇ-ಮೇಲ್ ಐಡಿ ಮೂಲಕವೂ ದೂರು ಸಲ್ಲಿಸಬಹುದಾಗಿದೆ.