
ಕಲಬುರಗಿ,ಮೇ.7: ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮೇ 10 ರಂದು ಜರುಗುವ ಸಾರ್ವತ್ರಿಕ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಲು ಆಗಮಿಸುವ ಮತದಾರರ ಎಡಗೈ ತೋರು ಬೆರಳಿಗೆ (left hand Fore finger) ಅಳಿಸಲಾಗದ ಶಾಯಿಯ ಗುರುತು ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ತಿಳಿಸಿದ್ದಾರೆ.