ವಿಧಾನಸಭೆ ಚುನಾವಣೆ : ತಿಕೋಟಾ ನಗರದಲ್ಲಿ ಸಹಿ ಸಂಗ್ರಹ ಅಭಿಯಾನ

ವಿಜಯಪುರ, ಮೇ.03: ವಿಧಾನಸಭೆ ಚುನಾವಣೆ ಅಂಗವಾಗಿ ಇಂದು ತಿಕೋಟಾ ನಗರದಲ್ಲಿ ಮತದಾನ ಜಾಗೃತಿ ಅಂಗವಾಗಿ ತಾಲೂಕು ಸ್ವೀಪ್ ಸಮಿತಿ ಹಾಗೂ ಪಟ್ಟಣ ಪಂಚಾಯತಿ ವತಿಯಿಂದ ನಗರದ ಪ್ರಮುಖ ಸ್ಥಳಗಳಲ್ಲಿ ಸಹಿ ಸಂಗ್ರಹ ಹಮ್ಮಿಕೊಂಡು ಸಾರ್ವಜನಿಕರಿಗೆ ಮತದಾನದ ಮಹತ್ವ ಕುರಿತು ತಿಳಿಸಿ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು & ಸಿಬ್ಬಂದಿಗಳು ಹಾಜರಿದ್ದರು.